ಯೋಗಾ ದಿನ: ಮೋದಿ ಯೋಗ ಮಾಡಿದ್ರೇ, ದೂರ ಉಳಿದ ಅಮಿತ್ ಶಾ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವದೆಹಲಿಯ ರಾಜ್ಪಥ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾ ಮಾಡಿದರೇ ಅತ್ತ ಬಿಜೆಪಿ...

ಪಟ್ನಾ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವದೆಹಲಿಯ ರಾಜ್ಪಥ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾ ಮಾಡಿದರೇ ಅತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯೋಗಾಸನ ಮಾಡುವುದರಿಂದ ದೂರ ಉಳಿದಿದ್ದಾರೆ.
ಪಟ್ನಾದ ಮೊಯ್ನುಲ್ ಹಖ್ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಅಮಿತ್ ಷಾ ಭಾಗವಹಿಸಿದ್ದರು. ಆದರೆ, ಅಮಿತ್ ಶಾ ಯಾವುದೇ ಆಸನಗಳನ್ನು ಮಾಡದೇ ದೂರ ಉಳಿದರು. ಇದರಿಂದ ನೂರಾರು ಜನರಿಗೆ ನಿರಾಸೆಯಾಯಿತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಬಿಹಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಚೌಧರಿ ಸೇರಿದಂತೆ ಹಲವರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


