ದೇಶ

ಕರ್ನಾಟಕ ಮೂಲದ ಎನ್‍ಆರ್‍ಐ ಟೆಕ್ಕಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ವಿಜ್ಞಾನಿಯೊಬ್ಬರಿಗೆ ರಷ್ಯಾದ ಅತ್ಯುನ್ನತ ತಾಂತ್ರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಧನ ನಿರ್ವಹಣೆಗೆ ಸಂಬಂಧಿಸಿ ನಡೆಸಿದ ಮಹತ್ವದ ಸಂಶೋಧನೆ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ...

ಕರ್ನಾಟಕ ಮೂಲದ ಎನ್‍ಆರ್‍ಐ ಟೆಕ್ಕಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ
ಭಾರತೀಯ ಮೂಲದ ವಿಜ್ಞಾನಿ ಪ್ರೊ. ಬಾಳಿಗಾ
Published On :

ಸೈಂಟ್ ಪೀಟರ್ಸ್ ಬರ್ಗ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ವಿಜ್ಞಾನಿಯೊಬ್ಬರಿಗೆ ರಷ್ಯಾದ ಅತ್ಯುನ್ನತ ತಾಂತ್ರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಧನ ನಿರ್ವಹಣೆಗೆ ಸಂಬಂಧಿಸಿ ನಡೆಸಿದ ಮಹತ್ವದ ಸಂಶೋಧನೆ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಪ್ರೊ. ಬಾಳಿಗಾ ಹಾಗೂ ಶುಜಿ ನಕಮುರಾ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಕ್ರವಾರ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಎಲ್ ಇಡಿಗೆ ಸಂಬಂಧಿಸಿದ ಮಹತ್ವದ ಸಂಶೋಧನೆಗಾಗಿ ನಕಮುರಾ ಅವರಿಗೆ ಈಗಾಗಲೇ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ರಷ್ಯಾ ನೀಡುವ ಈ ಅಂತಾರಾಷ್ಟ್ರೀಯ ಇಂಧನ ಪ್ರಶಸ್ತಿಯನ್ನು ನೊಬೆಲ್ ಪ್ರಶಸ್ತಿಗೆ ಸರಿಸಮಾನವಾಗಿ ಪರಿಗಣಿಸಲಾಗುತ್ತದೆ.

ಯಾರೀ ಜಯಂತ್?:

ಜಯಂತ್ ಬಾಳಿಗಾ ಅವರು ಹುಟ್ಟಿದ್ದು ಚೆನ್ನೈನಲ್ಲಾದರೂ ಮೂಲತಃ ಕರ್ನಾಟಕದವರು. ಅವರ ತಂದೆ ಬಿಎಚ್‍ಎಲ್‍ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಸಮೀಪದ ಜಾಲಹಳ್ಳಿಯಲ್ಲಿ ಬಾಲ್ಯದ ಶಿಕ್ಷಣ ಪಡೆದ ಜಯಂತ್ ಅವರು ಮದ್ರಾಸ್ ಐಐಟಿಯಲ್ಲಿ ಬಿ.ಟೆಕ್ ಮುಗಿಸಿದ್ದಾರೆ. ವಿದ್ಯುತ್‍ಗೆ ಸಂಬಂಧಿಸಿದ ಸೆಮಿಕಂಡಕ್ಟರ್‍ಗೆ ಸಂಬಂಧಿಸಿದ ಸಂಶೋಧನೆಗೆ ಪ್ರೊ. ಜಯಂತ್ ಅವರು ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.