ದೇಶ

ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಯೋಗ ಸಹಕಾರಿ: ರವಿಶಂಕರ್ ಪ್ರಸಾದ್

ಪಾಕಿಸ್ತಾನದಲ್ಲಿ ಶಾಂತಿ ನೆಲೆಸುವುದಕ್ಕೆ ಯೋಗ ಸಹಕಾರಿಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಯೋಗ ಸಹಕಾರಿ: ರವಿಶಂಕರ್ ಪ್ರಸಾದ್
Published On :

ಕೋಲ್ಕತ್ತಾ: ವಿಶ್ವದ 190 ಕ್ಕೂ ಹೆಚ್ಚು ರಾಷ್ಟ್ರಗಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ  ಆಚರಣೆ ನಡೆದಿದ್ದರೆ,  ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಮಾತ್ರ ಯೋಗ ದಿನಾಚರಣೆ ನಡೆದಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್,  ಯೋಗ ದಿನವನ್ನು ಆಚರಿಸದ ಪಾಕಿಸ್ತಾನ ತನ್ನ ನಿಲುವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಅಲ್ಲದೇ ಪಾಕಿಸ್ತಾನದಲ್ಲಿ ಶಾಂತಿ ನೆಲೆಸುವುದಕ್ಕೆ ಯೋಗ ಸಹಕಾರಿಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸಿರುವ 190 ರಾಷ್ಟ್ರಗಳ ಪೈಕಿ 44 ರಾಷ್ಟ್ರಗಳು ಮುಸ್ಲಿಂ ರಾಷ್ಟ್ರಗಳಾಗಿವೆ. ಚೀನಾ, ಲಂಡನ್, ನ್ಯೂಯಾರ್ಕ್ ನಲ್ಲಿ ಯೋಗ ದಿನ ಆಚರಣೆಯಾಗಿದ್ದು ಈ ಎಲ್ಲಾ ರಾಷ್ಟ್ರಗಳು ಯೋಗವನ್ನು  ಮಾನವಕುಲದ ಮುಖ್ಯವಾದ ಅಂಶ ಎಂಬುದನ್ನು ಒಪ್ಪಿವೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಪಾಕಿಸ್ತಾನವು ಯೋಗ ದಿನಾಚರಣೆ ಮಾಡುವುದಾಗಿ ಈ ಹಿಂದೆ ತಿಳಿಸಿತ್ತು. ಆದರೆ ಏಕಾಏಕಿ ನಿಲ್ಲಿಸಿದೆ. ಪಾಕಿಸ್ತಾನ ತನ್ನ ನಿಲುವಿನ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಿ ಎಂದು ರವಿಶಂಕರ್ ಪ್ರಸಾದ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.