ದೇಶ

ಶೈಕ್ಷಣಿಕ ಸಾಲಕ್ಕೆ ಏಕರೀತಿ ನಿಯಮ ಅನುಸರಿಸಿ: ಬ್ಯಾಂಕ್ ಗಳಿಗೆ ಕೇರಳ ಸಿಎಂ ಸೂಚನೆ

ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲಕ್ಕೆ ಎಲ್ಲಾ ಬ್ಯಾಂಕ್ ಗಳು ಏಕ ರೀತಿಯ ನಿಯಮ ಪಾಲಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಸೂಚನೆ...

ಶೈಕ್ಷಣಿಕ ಸಾಲಕ್ಕೆ ಏಕರೀತಿ ನಿಯಮ ಅನುಸರಿಸಿ: ಬ್ಯಾಂಕ್ ಗಳಿಗೆ ಕೇರಳ ಸಿಎಂ ಸೂಚನೆ
ಕೇರಳ ಸಿಎಂ ಒಮನ್ ಚಾಂದಿ
Published On :

ತಿರುವನಂತಪುರ: ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲಕ್ಕೆ ಎಲ್ಲಾ ಬ್ಯಾಂಕ್ ಗಳು ಏಕ ರೀತಿಯ ನಿಯಮ ಪಾಲಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಸೂಚನೆ ನೀಡಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬ್ಯಾಂಕ್ ಗಳು  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ವಿಭಿನ್ನ ರೀತಿಯ ಪ್ರಕ್ರಿಯೆಗಳನ್ನು ಅನುಸರಿಸುತ್ತಿವೆ. ಬಡ್ಡಿ ದರ ಹಾಗೂ, ಸಾಲ ಮರುಪಾವತಿ ಮಾಡುವ ಸಂದರ್ಭದಲ್ಲಿ ಕೆಲವೊಂದು ಷರತ್ತುಗಳನ್ನು ಅನುಸರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ, ಹೀಗಾಗಿ ಎಲ್ಲಾ ಬ್ಯಾಂಕ್ ಗಳು ಏಕ ರೀತಿ ನಿಯಮ ಜಾರಿಗೆ ತರಲು ಅವರು ಸಲಹೆ ನೀಡಿದ್ದಾರೆ.

ಇನ್ನು ಕಲಹ ಪೀಡಿತ ರಾಷ್ಟ್ರಗಳಾದ ಸಿರಿಯಾ, ಲಿಬಿಯಾ, ಇರಾಕ್ ನಂತಹ ರಾಷ್ಟ್ರಗಳಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಬ್ಯಾಂಕ್ ಗಳು ಈ ರಾಜ್ಯ ಸರ್ಕಾರಕ್ಕೆ ಪೂರಕವಾಗಿ ಸ್ಪಂದಿಸುತ್ತಿಲ್ಲ. ಜೊತೆಗೆ ರಾಜ್ಯದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕ್ ಗಳ ಸಹಾಯ ಅಗತ್ಯ ಎಂದು ಒಮನ್ ಚಾಂದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.