ದೇಶ

ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ: 40 ಕೆಜಿ ಚಿನ್ನ ವಶ

ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 40 ಕೆಜಿ ಚಿನ್ನವನ್ನು ಕೇಂದ್ರದ ತೆರಿಗೆ ಇಲಾಖೆ ತನಿಖಾಧಿಕಾರಿಗಳು...

ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ: 40 ಕೆಜಿ ಚಿನ್ನ ವಶ
ಬಂಗಾರ (ಸಾಂದರ್ಭಿಕ ಚಿತ್ರ)
Published On :

ವಿಶಾಖಪಟ್ಟಣ: ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 40 ಕೆಜಿ ಚಿನ್ನವನ್ನು ಕೇಂದ್ರದ ತೆರಿಗೆ ಇಲಾಖೆ ತನಿಖಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದಿಳಿದ ಮೂರು ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪರಿಶೀಲನೆ ನಡೆಸುವ ವೇಳೆ ಕಳ್ಳ ಸಾಗಣಿಕೆ ಮಾಡುತ್ತಿದ್ದ ಚಿನ್ನ ಸೋಮವಾರ ಪತ್ತೆಯಾಗಿದೆ. ಇಷ್ಟೊಂದು ಚಿನ್ನ ವಶ ಪಡಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಕಳ್ಳಸಾಗಣಿಕೆ ಕೃತ್ಯಕ್ಕೆ ಸಂಬಂಧಿಸಿದಂತೆ ಒಟ್ಟು 50 ಮಂದಿಯನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. 50 ಮಂದಿ ಸಿಂಗಾಪೂರ್ ಮತ್ತು ಮಲೇಷ್ಯಾದಿಂದ ಮೂರು ವಿಮಾನಗಳಲ್ಲಿ ಬಂದಿಳಿಯುತ್ತಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದ ಕಾರಣ ತನಿಖಾಧಿಕಾರಿಗಳು ಕಟ್ಟು ನಿಟ್ಟಿನ ಪರಿಶೀಲನೆ ನಡೆಸಿದ್ದರು.

ಪ್ರಯಾಣಿಕರ ಲಗೇಜ್ ನಲ್ಲಿ ಮನೆ ಬಳಕೆಯ ವಸ್ತುಗಳ ನಡುವೆ, ಮೊಬೈಲ್ ಫೋನ್‌ಗಳ ನಡುವೆ ಬಚ್ಚಿಟ್ಟು ಕಳ್ಳ ಸಾಗಣಿಕೆ ಮಾಡಲು ಯತ್ನಿಸಲಾಗಿತ್ತು.

ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದರ ಬಗ್ಗೆ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.