ದೇಶ

ತುರ್ತು ಪರಿಸ್ಥಿತಿ ಬಗ್ಗೆ ಅಡ್ವಾಣಿ ಹೇಳಿಕೆ ಕಡೆಗಣಿಸುವಂತಿಲ್ಲ: ಶಿವಸೇನೆ

ಶಿವಸೇನೆ ಸಹ ಎಲ್.ಕೆ ಅಡ್ವಾಣಿ ಹೇಳಿಕೆಗೆ ದನಿಗೂಡಿಸಿದ್ದು, ಹಿರಿಯ ರಾಜಕಾರಣಿ ಅಡ್ವಾಣಿ ಅವರ ಹೇಳಿಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ತುರ್ತು ಪರಿಸ್ಥಿತಿ ಬಗ್ಗೆ ಅಡ್ವಾಣಿ ಹೇಳಿಕೆ ಕಡೆಗಣಿಸುವಂತಿಲ್ಲ: ಶಿವಸೇನೆ
ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ(ಸಾಂದರ್ಭಿಕ ಚಿತ್ರ)
Published On :

ಮುಂಬೈ: ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗುವ ಸಾಧ್ಯತೆ ಇದೆ ಎಂಬ ಅಡ್ವಾಣಿ ಹೇಳಿಕೆ ಈಗ ಬಿಜೆಪಿ ಹಾಗೂ ಅದ ಮಿತ್ರ ಪಕ್ಷಗಳ ನಡುವೆಯೇ ಭಿನ್ನಾಭಿಪ್ರಾಯ ಮೂಡಿಸಲು ಕಾರಣವಾಗುತ್ತಿದೆ.  ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾಗಿರುವ ಶಿವಸೇನೆ ಸಹ ಎಲ್.ಕೆ ಅಡ್ವಾಣಿ ಹೇಳಿಕೆಗೆ ದನಿಗೂಡಿಸಿದ್ದು, ಹಿರಿಯ ರಾಜಕಾರಣಿ ಅಡ್ವಾಣಿ ಅವರ ಹೇಳಿಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.   

ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಅಡ್ವಾಣಿ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಶಿವಸೇನೆ,  ರಾಜಕೀಯ ಕ್ಷೇತ್ರದಲ್ಲಿ ಎಲ್.ಕೆ ಅಡ್ವಾಣಿ ದಶಕಗಳ ಕಾಲ ಪಳಗಿದ್ದಾರೆ. ಆದ್ದರಿಂದ ಮತ್ತೆ ತುರ್ತು ಪರಿಸ್ಥಿತಿ ಎದುರಾಗುವ ಬಗ್ಗೆ ಅವರ ಹೇಳಿಕೆಯನ್ನು ಕಡೆಗಣಿಸಲಾಗಡು ಎಂದಿದೆ. ಈ ಸಾಮ್ನಾದ ಸಂಪಾದಕೀಯ ಅಡ್ವಾಣಿಗೆ ಬೆಂಬಲಿಸುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧ ನಿಲುವನ್ನು ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಯಾವುದೇ ತರಾತುರಿಯಲ್ಲಿ ಹೇಳಿಕೆ ನೀಡಿಲ್ಲ. ಅವರು ಯಾರನ್ನು ಗಮನದಲ್ಲಿಟ್ಟುಕೊಂಡು ಮತ್ತೆ ತುರ್ತು ಪರಿಸ್ಥಿತಿ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಶಿವಸೇನೆ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ನಡೆದ ಬಳಿಕ ಶಿವಸೇನೆ ಹಾಗೂ ಬಿಜೆಪಿ ನಡುವೆ ಹಲವು ವಿಚಾರಗಳಲ್ಲಿ  ಭಿನ್ನಾಭಿಪ್ರಾಯ ಮೂಡಿದ್ದು, ಅವಕಾಶ ಸಿಕ್ಕಾಗಲೆಲ್ಲಾ ಮೋದಿ ವಿರುದ್ಧ ಶಿಅವಸೇನೆ ವಾಗ್ದಾಳಿ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.