ಭಾರತದ ಭೂಪಟವನ್ನು ಮುಕ್ಕಾಗಿಸಿ ಜಾಹಿರಾತು ಪ್ರಕಟಿಸಿದ ಮಲೇಶಿಯಾದ
ಮಲೇಷಿಯಾದ ಎನ್ ಲೈನ್ ಪತ್ರಿಕೆ ಭಾರತದ ಭೂಪಟವನ್ನು ಮುಕ್ಕಾಗಿಸಿ ಜಾಹೀರಾತು ಪ್ರಕಟಿಸಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ನವದೆಹಲಿ: ಮಲೇಷಿಯಾದ ಆನ್ ಲೈನ್ ಪತ್ರಿಕೆ ಭಾರತದ ಭೂಪಟವನ್ನು ಮುಕ್ಕಾಗಿಸಿ ಜಾಹೀರಾತು ಪ್ರಕಟಿಸಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ಪೆಸಿಫಿಕ್ ಏಷಿಯಾ ಟ್ರಾವೆಲ್ ಅಸೋಸಿಯೇಷನ್(ಪಾಟಾ) ಸಹಯೋಗದೊಂದಿಗೆ ರಾಜ್ಯ ಸರ್ಕಾರ ಸೆಪ್ಟೆಂಬರ್ ತಿಂಗಳಲ್ಲಿ ಪ್ರವಾಸ ಮೇಳ ಆಯೋಜಿಸಿದೆ. ಈ ಬಗ್ಗೆ ಮಾಹಿತಿ ನೀಡುವ ವೇಳೆ ಮಲೇಷಿಯಾದ ಎನ್ ಲೈನ್ ಪತ್ರಿಕೆ ಭಾರತದ ಭೂಪಟವನ್ನು ಮುಕ್ಕಾಗಿಸಿ ಜಾಹೀರಾತು ಪ್ರಕಟಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ.
ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಈಶಾನ್ಯ ಭಾರತವನ್ನು ದೇಶದ ಭೂಪಟದಿಂದ ಕೈಬಿಟ್ಟು ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವರಗಳನ್ನು ಟಿಟಿಜಿ ಆನ್ ಲೈನ್ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಜತೆಗೆ ಈ ಜಾಹೀರಾತಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲಾಂಛನ ಬಳಸಲಾಗಿದೆ. ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಇಲಾಖಾ ಅಧಿಕಾರಿಗಳ ಜತೆ ಸಭೆ ನಡೆಸಿದ ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ, ಪಾಟಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ದೂರವಾಣಿ ಮಾತುಕತೆ ನಡೆಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದೇ ಜಾಹೀರಾತು ನೀಡಿರುವುದು ತಪ್ಪು. ತಕ್ಷಣ ಜಾಹೀರಾತನ್ನು ವಾಪಸ್ ಪಡೆದು, ಈಗಾಗಿರುವ ತಪ್ಪಿಗೆ ಬೇಷರತ್ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದಾರೆ. ಆನ್ ಲೈನ್ ಪತ್ರಿಕೆಯಿಂದ ಸ್ಪಷ್ಟೀಕರಣ ಕೇಳಬೇಕು ಎಂದೂ ಸಚಿವರು ತಿಳಿಸಿದ್ದಾರೆ.
ಈ ಜಾಹೀರಾತಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ದೇಶಪಾಂಡೆ ಸ್ಪಷ್ಟಪಡಿಸಿದ್ದರು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದ್ದು, ಜಾಹೀರಾತು ನಾವು ಕೊಟ್ಟಿದ್ದಲ್ಲ ಎಂದು ಸಚಿವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪು ಮಾಡಿರುವವರ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


