ತೋಮಾರ್ ನಕಲಿ ಪ್ರಮಾಣ ಪತ್ರ; ನನಗೆ ಸತ್ಯ ಗೊತ್ತಿರಲಿಲ್ಲ- ಅರವಿಂದ್ ಕೇಜ್ರಿವಾಲ್
ಮಾಜಿ ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ...

ನವದೆಹಲಿ: ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ ಸುಮ್ಮನಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮೌನ ಮುರಿದಿದ್ದಾರೆ.
ದೆಹಲಿ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯವಾದದ್ದು, ಇದುವರೆಗೂ ನಾನು ಕತ್ತಲೆಯಲ್ಲಿ ಮುಳುಗಿ ಹೋಗಿದ್ದೆ. ತೋಮಾರ್ ತೋರಿದ್ದ ದಾಖಲೆಗಳು ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಸದನಕ್ಕೆ ವಿವರ ನೀಡಿದರು.
ನಕಲಿ ಪದವಿ ಪ್ರಮಾಣ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಒಂದು ವೇಳೆ ಜಿತೇಂದ್ರ ಸಿಂಗ್ ತೋಮಾರ್ ಅವರದ್ದು ತಪ್ಪು ಎಂದು ಸಾಬೀತಾದರೇ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಯಾವುದೇ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅದನ್ನು ಪಕ್ಷ ಹಾಗೂ ನಾನು ಸಹಿಸಲ್ಲ. ಯಾವುದೇ ಸಚಿವರೊಂದಿಗೆ ನನಗೆ ವಯಕ್ತಿಕ ಸಂಬಂಧವಿಲ್ಲ. ಹೀಗಾಗಿಯೇ ತೋಮಾರ್ ರಾಜೀನಾಮೆ ಅಂಗೀಕರಿಸಿದ್ದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


