ಲಲಿತ್ ಮೋದಿ ವಿಚಾರದಲ್ಲಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ: ಅರುಣ್ ಜೇಟ್ಲಿ
ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಇಟ್ಟಿರುವ ಹೆಜ್ಜೆ ಸರಿಯಾಗಿದ್ದು, ಹೆಜ್ಜೆ ಹಿಂತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ...

ನವದೆಹಲಿ: ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಇಟ್ಟಿರುವ ಹೆಜ್ಜೆ ಸರಿಯಾಗಿದ್ದು, ಹೆಜ್ಜೆ ಹಿಂತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಸರ್ಕಾರ ಕಾನೂನಿನ ನಿಯಮದನುಸಾರವಾಗಿ ನಡೆಯುತ್ತಿದ್ದು, ಲಲಿತ್ ಮೋದಿ ಪ್ರಕರಣದಲ್ಲಿ ಸರ್ಕಾರ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ವಿರೋಧ ಪಕ್ಷಗಳ ಕೇಂದ್ರ ಸರ್ಕಾರ ಭ್ರಷ್ಟರ ಪರವಾಗಿದೆ ಎಂಬ ಆರೋಪದ ಕುರಿತಂತೆ ಮಾನತಾಡಿರುವ ಅವರು, ಸರ್ಕಾರ ಎಂದಿಗೂ ಭ್ರಷ್ಟರ ಪರವಾಗಿ ಕೆಲಸ ಮಾಡಿಲ್ಲ. ಮುಂದೆಯೂ ಎಂದಿಗೂ ಮಾಡುವುದಿಲ್ಲ. ಹೀಗಾಗಿ ಭ್ರಷ್ಟರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂಬ ಪ್ರಶ್ನೆಯೇ ಏಳುವುದಿಲ್ಲ. ಇಂತಹ ಆರೋಪಗಳನ್ನು ಸರ್ಕಾರ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ.
ಪ್ರತಿಪಕ್ಷಗಳು ಮುಂಗಾರು ಅಧಿವೇಶನದ ಸಮಯದಲ್ಲಿ ಲಲಿತ್ ಮೋದಿ ವಿಚಾರದ ಕುರಿತಂತೆ ಚರ್ಚೆ ನಡೆಸಲು ಚಿಂತನೆ ನಡೆಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಸಂಸತ್ತಿರುವುದು ವಿಷಯಗಳನ್ನು ಚರ್ಚಿಸಲೆಂದೇ ಹೊರತು ವ್ಯವಹಾರ, ಚರ್ಚೆಗಳನ್ನು ಹಾಳು ಮಾಡಲು ಅಲ್ಲ. ವಿರೋಧ ಪಕ್ಷಗಳು ಚರ್ಚೆ ನಡೆಸಲಿ ಎಂಬುದನ್ನೇ ನಾವು ಬಯಸುವುದು. ವಿರೋಧ ಪಕ್ಷಗಳು ಯಾವುದೇ ವಿಷಯವನ್ನು ತೆಗೆದುಕೊಂಡು ಚರ್ಚೆಗೆ ಬಂದರೂ ಆ ಕುರಿತಂತೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


