ದೇಶ

ಲಲಿತ್ ಮೋದಿ ಪ್ರಕರಣ: ಸಿಎಂ ವಸುಂಧರಾ ರಾಜೇ ಲಂಡನ್ ಪ್ರವಾಸ ರದ್ದು

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ .....

ಲಲಿತ್ ಮೋದಿ ಪ್ರಕರಣ: ಸಿಎಂ ವಸುಂಧರಾ ರಾಜೇ ಲಂಡನ್ ಪ್ರವಾಸ ರದ್ದು
ವಸುಂಧರಾ ರಾಜೇ
Published On :

ಜೈಪುರ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಅವರ ಪುತ್ರ ದುಶ್ಯಂತ್ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಸುಂದರಾ ರಾಜೇ ತಮ್ಮ ಲಂಡನ್ ಪ್ರವಾಸ ರದ್ದುಗೊಳಿಸಿದ್ದಾರೆ.

ಸಿಎಂ ವಸುಂಧರಾ ರಾಜೇ ಲಂಡನ್ ನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜಸ್ತಾನ ನಿಯೋಗದೊಂದಿಗೆ ಶುಕ್ರವಾರ ತೆರಳಬೇಕಿತ್ತು. ಆದರೆ ನೀತಿ ಆಯೋಗ ಸಂಬಂಧ ಮಹತ್ವದ ವಾದ ಸಭೆ ಇರುವುದರಿಂದ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಲಲಿತ್ ಮೋದಿ ಪ್ರಕರಣದಲ್ಲಿ ತಮ್ಮ ಹೆಸರು ಥಳುಕು ಹಾಕಿಕೊಂಡಿರುವ ಸಂಬಂಧ ಇದುವರೆಗೂ ವಸುಂಧರಾ ರಾಜೇ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ತಮ್ಮ ಕೈವಾಡ ಇದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಇನ್ನು ಬಿಜೆಪಿ ಕೂಡ ವಸುಂಧರಾ  ರಾಜೇ ಅವರಿಂದ ಅಂತರ ಕಾಯ್ದುಕೊಂಡಿದೆ, ಎಲ್ಲಿಯೂ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡದಂತೆ ಸೂಚನೆ ನೀಡಿದೆ, ಇದೆಲ್ಲದರ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ  ವಸುಂಧರಾ ರಾಜೇ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.