ದೇಶದ್ಯಾಂತ ಮುಂಗಾರು ಮಳೆ ಅಬ್ಬರ: ಗುಜರಾತ್ ನಲ್ಲಿ 40 ಸಾವು, ಕಾಶ್ಮೀರದಲ್ಲಿ ಪ್ರವಾಹ ಭೀತಿ
ದೇಶಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಹಲವು ರಾಜ್ಯಗಳ ಜೀವನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿಯುಂಟಾಗಿ

ದೇಶಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಹಲವು ರಾಜ್ಯಗಳ ಜೀವನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿಯುಂಟಾಗಿದೆ.
ಗುಜಾರಾತ್ ನಲ್ಲಿ ಗಾಳಿಸಹಿತ ಸುರಿಯುತ್ತಿರುವ ಧಾರಾಕಾರ ಮಳೆಗೆ 40 ಮಂದಿ ಬಲಿಯಾಗಿದ್ದಾರೆ. ರಾಜ್ ಕೋಟ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಗುಜರಾತ್ ನಲ್ಲಿ ವಾಯುಭಾರ ಕುಸಿತದಿಂದ ಮಳೆಯ ಹೆಚ್ಚಾಗಿ ಸುರಿಯುತ್ತಿದೆ.
ಕಣಿವಾ ರಾಜ್ಯ ಕಾಶ್ಮೀರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕಳೆದ ವರ್ಷದ ರೀತಿಯಲ್ಲೇ ಪ್ರವಾಹ ಸಂಭವಿಸುವ ಭೀತಿ ಎದುರಾಗಿದೆ. ಕಾಶ್ಮೀರದ ಜೇಲಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ, ಅನಂತ್ ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳ ಜನತೆಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು ಸುರಕ್ಷಿತ ಸ್ಥಳಗಳಿಗೆ ಅಲ್ಲಿನ ಜನರನ್ನು ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಇಂದು ರಾಜಸ್ತಾನಕ್ಕೆ ಮುಂಗಾರು ಕಾಲಡಲಿದ್ದು ಭಾರಿ ಮಳೆ ನಿರೀಕ್ಷಿಸಲಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಈ ತಿಂಗಳು ಶೇ 80.ರಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಸ್ಸಾಂನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಭೀತಿ ಎದುರಾಗಿದೆ.
ಅಸ್ಸಾಂನ 25 ಜಿಲ್ಲೆಗಳ ಸುಮಾರು 22 ಸಾವಿರ ಮಂದಿ ಮಳೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


