ದೇಶ

ಮೀನಾ ನೇಮಕಾತಿ ವಿರುದ್ಧ 'ಹೈ' ಮೆಟ್ಟಿಲೇರಿದ ದೆಹಲಿ ಸರ್ಕಾರ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಖ್ಯಸ್ಥರಾಗಿ ಹಿರಿಯ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ನೇಮಕ ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಮೀನಾ ನೇಮಕಾತಿ ವಿರುದ್ಧ 'ಹೈ' ಮೆಟ್ಟಿಲೇರಿದ ದೆಹಲಿ ಸರ್ಕಾರ
ನಜೀಬ್ ಜಂಗ್ - ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಖ್ಯಸ್ಥರಾಗಿ ಹಿರಿಯ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ನೇಮಕ ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಸಿಬಿ ಮುಖ್ಯಸ್ಥರನ್ನಾಗಿ ಎಸ್‌ಎಸ್ ಯಾದವ್ ಅವರನ್ನು ನೇಮಕ ಮಾಡಿದ್ದರು. ಆದಾಗ್ಯೂ ಜೂನ್ 9ರಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಅದೇ ಹುದ್ದೆಗೆ ಮೀನಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.

ಇದೀಗ ಆ ನೇಮಕಾತಿಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆ ಅಧಿಕಾರ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧದ ಆಮ್ ಆದ್ಮಿ ಪಕ್ಷದ ಅರ್ಜಿ ವಿಚಾರಣೆಯಾಗುವವರೆಗೆ ಮೀನಾ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಕೋರಿದೆ.

ಮೀನಾ ನೇಮಕಾತಿಗೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಮಧ್ಯೆ ತೀವ್ರ ಜಟಾಪಟಿಯೂ ನಡೆದಿತ್ತು. ಅಲ್ಲದೆ ಮೀನಾ ಅವರ ತರಾತುರಿಯ ನೇಮಕಾತಿ ಹಿಂದೆ ಸಂಚು ಅಡಗಿದೆ ಎಂದು ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಪಾದಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.