ದೇಶ

ಕಾಶ್ಮೀರದಲ್ಲಿ ಮತ್ತೆ ಹಾರಿದ ಪಾಕ್ ಧ್ವಜ!

ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿ ಬಂದ ಅಪರಿಚಿತ ಬಂದೂಕು ದಾರಿಗಳು ಶನಿವಾರ ಕಾಶ್ಮೀರದ ಎತ್ತರ ಗೋಪುರಗಳ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎಂದು ತಿಳಿದುಬಂದಿದೆ...

ಕಾಶ್ಮೀರದಲ್ಲಿ ಮತ್ತೆ ಹಾರಿದ ಪಾಕ್ ಧ್ವಜ!
ಭಾರತದ ವಿರುದ್ಧ ಘೋಷಣೆ ಕೂಗಿ ಪಾಕ್ ಧ್ವಜ ಹಾರಿಸಿದ ಯುವಕರ ಗುಂಪು
Published On :

ಶ್ರೀನಗರ: ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿ ಬಂದ ಅಪರಿಚಿತ ಬಂದೂಕು ದಾರಿಗಳು ಶನಿವಾರ ಕಾಶ್ಮೀರದ ಎತ್ತರ ಗೋಪುರಗಳ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಇದ್ದಕ್ಕಿಂತೆ ಮುಸುಕುಧಾರಿಗಳಾಗಿ ಬಂದ ಯುವಕರ ಗುಂಪೊಂದು ಭಾರತ ವಿರುದ್ಧ ಘೋಷಣೆಗಳನ್ನು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಹೋದಾಗ ಪೊಲೀಸರು ಹಾಗೂ ಅಪರಿಚಿತ ವ್ಯಕ್ತಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಸ್ವಲ್ಪ ಸಮಯದ ನಂತರ ಬಂದ ಮತ್ತೊಂದು ಗುಂಪು ಎತ್ತರದ ಗೋಪುರಗಳ ಮೇಲೆ ನಿಂತು ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣವೊಂದು ವರದಿಯಾಗಿತ್ತು. ಪ್ರತ್ಯೇಕತಾವಾದಿ ನಾಯಕ ಹತ್ಯೆ ವಿರೋಧಿಸಿ ಜೂ.12 ರಂದು ಅಪರಿಚಿತ ಬಂದೂಕುಧಾರಿಗಳು ಬಂದು ಕಾಶ್ಮೀರದ ಎರಡು ಸ್ಥಳಗಳಲ್ಲಿ ಪಾಕಿಸ್ತಾನ ಹಾಗೂ ಇಸಿಸ್ ಉಗ್ರ ಗುಂಪಿನ ಧ್ವಜಗಳನ್ನು ಹಾರಿಸಿದ್ದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಯುವಕರ ಗುಂಪನ್ನು ಬಂಧನಕ್ಕೊಳಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.