ದೇಶ

ಲಲಿತ್ ಪಾಸ್ ಪೋರ್ಟ್ ಮಾಹಿತಿ ಕೊಡಲ್ಲ: ಕೇಂದ್ರ

ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ಪಾಸ್‍ಪೋರ್ಟ್ ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಕೇಳಿ ಸಲ್ಲಿಸಲಾಗಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಲು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ...

ಲಲಿತ್ ಪಾಸ್ ಪೋರ್ಟ್ ಮಾಹಿತಿ ಕೊಡಲ್ಲ: ಕೇಂದ್ರ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Published On :

ನವದೆಹಲಿ: ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ಪಾಸ್‍ಪೋರ್ಟ್ ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಕೇಳಿ ಸಲ್ಲಿಸಲಾಗಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಲು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ.

ಮೋದಿ ಅವರಿಗೆ ಪಾಸ್ ಪೋರ್ಟ್ ವಾಪಸ್ ನೀಡುವ ದೆಹಲಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸದಿರುವ ನಿರ್ಧಾರ ತೆಗೆದುಕೊಂಡವರು ಯಾರು ಸೇರಿದಂತೆ ಒಟ್ಟು ಏಳು ಪ್ರಶ್ನೆಗಳಿಗೆ ಮಾಹಿತಿ ಕೇಳಿ ಹರಿಯಾಣದ ರಾಯೋ ಎಂಬವರು ವಿದೇಶಾಂಗ ಸಚಿವಾಲಯ (ಎಂಇಎ)ಕ್ಕೆ ಈ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯ ಅರ್ಜಿಯ ಮೊದಲ ಮೂರು ಪ್ರಶ್ನೆಗಳಿಗೆ ಆರ್‍ಟಿಐನಡಿ ಉತ್ತರಿಸಲು ಸಾಧ್ಯವಿಲ್ಲ ಎಂದಿದೆ. ಜತೆಗೆ, ಉಳಿದ ನಾಲ್ಕು ಪ್ರಶ್ನೆಗಳ ಉತ್ತರ ವಿದೇಶಾಂಗ ಸಚಿವಾಲಯದ ಬಳಿ ಇಲ್ಲ ಎಂದು ಸ್ಪಷ್ಟೀಕರಣ ನೀಡಿದೆ. ಆದರೆ, ಈ ಅರ್ಜಿಯನ್ನು ರಾಯಭಾರ, ಪಾಸ್ ಪೋರ್ಟ್ ಹಾಗೂ ವೀಸಾ ವಿಭಾಗಕ್ಕೂ ಕಳುಹಿಸಿಕೊಡಲಾಗಿ ಹೇಳಿದೆ.

ಸಚಿವಾಲಯದ ಈ ನಡೆ ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ಇದು ಆರ್‍ಟಿಐ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಮೋದಿ ಸರ್ಕಾರವು ಪಾರದರ್ಶಕತೆಗೆ ಕೊಡಲಿ ಏಟು ನೀಡಿದೆ ಎಂದು ಸಿಪಿಎಂ ಆರೋಪಿಸಿದೆ.

ಹುದ್ದೆ ಬಿಡಿ ಎಂಬ ಆಡ್ವಾಣಿ ಹೇಳಿಕೆಗೆ ಪ್ರತಿಪಕ್ಷಗಳ ಬೆಂಬಲ

ಕಳಂಕ ಬಂದರೆ ಹುದ್ದೆ ಬಿಡಿ ಎನ್ನುವ ಆಡ್ವಾಣಿ ಅವರ ಹೇಳಿಕೆಗೂ ಬೆಂಬಲ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಲಲಿತ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸುಷ್ಮಾ ಹಾಗೂ ರಾಜೇ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಆಡ್ವಾಣಿ ಅವರು ಕಳಂಕಿತರಿಗೆ ಸ್ಪಷ್ಟ ಸಂದೇಶರವಾನಿಸಿದ್ದಾರೆ. ರಾಜಿನಾಮೆ ನೀಡುವಂತೆ ಪರೋಕ್ಷವಾಗಿ ಸೂಚಿಸಿದ್ದಾರೆ. ಜನ ಹೇಳುತ್ತಿರುವುದನ್ನೇ ಆಡ್ವಾಣಿ ಹೇಳಿದ್ದಾರೆ. ಆದರೆ, ಪ್ರಧಾನಿ ಮಾತ್ರ ಈ ವಿಚಾರಕ್ಕೆ ಸಂಬಂಧಿಸಿ ಮೌನವಹಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಪಿ.ಸಿ. ಚಾಕೋ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.