ವಸುಂಧರಾ ರಾಜೇ, ಲಲಿತ್ ಮೋದಿ ಬ್ಯುಸಿನೆಸ್ ಪಾರ್ಟ್‌ನರ್: ಕಾಂಗ್ರೆಸ್
ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ನೇರ ವ್ಯವಹಾರಿಕ ಸಂಬಂಧ...

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ನೇರ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ ಎಂದು ಸೋಮವಾರ ಕಾಂಗ್ರೆಸ್ ಆರೋಪಿಸಿದೆ.
ವಸುಂಧರಾ ರಾಜೇ ಹಾಗೂ ಅವರ ಪುತ್ರ ದುಶ್ಯಂತ್ ಸಿಂಗ್, ಸೊಸೆ ನಿಹಾರಿಕಾ ಸಿಂಗ್ ಮತ್ತು ಲಲಿತ್ ಮೋದಿ ಒಡೆತನದ ನಿಯಾಂತ್ ಪ್ರೈ. ಲಿಮಿಟೆಡ್, ರಾಜಸ್ಥಾನ ಧೋಲ್‌ಪುರಿ ಸರ್ಕಾರಿ ಅರಮನೆಯನ್ನು ತಮ್ಮ ಸ್ವಾರ್ಥಕ್ಕಾಗಿ ಐಶಾರಾಮಿ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ದೂರಿದ್ದಾರೆ.
ಲಲಿತ್ ಮೋದಿ ಹಾಗೂ ವಸುಂಧರಾ ರಾಜೇ ಬ್ಯುಸಿನೆಸ್ ಪಾರ್ಟ್‌ನರ್ ಆಗಿದ್ದು, ರಾಜೇ ಸರ್ಕಾರಿ ಆಸ್ತಿಯನ್ನು ಸ್ವಂತದ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಜೈರಾಮ್ ರಮೇಶ್ ದಾಖಲೆಗಳನ್ನು ಬಿಡುಗಡೆ ಮಾಡಿದರು.
ರಾಜೇ ಸರ್ಕಾರಿ ಆಸ್ತಿಯನ್ನು ಐಶಾರಾಮಿ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ. ಧೋಲ್‌ಪುರಿ ಅರಮನೆಯನ್ನು ನಿಯಾಂತ್ ಹೆರಿಟೇಜ್ ಪ್ರೈ.ಲಿಮಿಟೆಡ್ ನಡೆಸುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


