ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆಸಿ ಗುಪ್ತಾಂಗದಲ್ಲಿ ಕೋಲು ತುರುಕಿದರು
ಹದಿನಾಲ್ಕು ವರ್ಷ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಕೋಲು ತುರುಕಿರುವ ಹೃದಯ ವಿದ್ರಾವಕ ಘಟನೆ...

ನವದೆಹಲಿ: ಹದಿನಾಲ್ಕು ವರ್ಷ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಕೋಲು ತುರುಕಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ಬದೌನ್‌ನಲ್ಲಿ ನಡೆದಿದೆ.
ಬಾಲಕಿಯ ನೆರಮನೆಯವರೇ ಈ ಕೃತ್ಯವೆಸಗಿದ್ದಾರೆ. ಘಟನೆ ಸಂಬಂಧ ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ. ವೈದ್ಯಕೀಯ ವರದಿಯ ಪ್ರಕಾರ, ಬಾಲಕಿಯ ಗುಪ್ತಾಂಗಕ್ಕೆ ಬೆಂಕಿಪೊಟ್ಟಣ, ಬಟ್ಟೆ, ಪ್ಲಾಸ್ಟಿಕ್ ಮತ್ತು ಮರದ ತುಂಡುಗಳನ್ನು ತುರುಕಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಮಂಗಳವಾರ ಬಿಸ್ಕೇಟ್ ತರಲು ಅಂಗಡಿಗೆ ತೆರಳಿದ್ದಾಗ ಪಕ್ಕದ ಮನೆಯಾತ ಯಾರೋ ಕಾಯುತ್ತಿರುವುದಾಗಿ ಹೇಳಿದ ಆತನೊಂದಿಗೆ ತೆರಳುತ್ತಿದ್ದಾಗ ಮತ್ತಿಬ್ಬರು ಜೊತೆಗೂಡಿ, ಕಟ್ಟಿಹಾಕಿ ಬೈಕ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮದ್ಯ ಸೇವಿಸುವಂತೆ ಒತ್ತಾಯಿಸಿದರು. ನಿರಾಕರಿಸಿದಾಗ ಒಬ್ಬಾತ ಮನಬಂದಂತೆ ಥಳಿಸಿದ, ನಂತರ ಸಾಮೂಹಿಕ ಅತ್ಯಾಚಾರವೆಸಗಿ, ಮನೆ ಬಳಿ ಬಿಟ್ಟು ಪೊಲೀಸರಿಗೆ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಬೆದರಿಸಿದರು ಎಂದು ಬಾಲಕಿ ದೂರು ನೀಡಿದ್ದಾಳೆ.
ಘಟನೆ ನಡೆದ 3 ದಿನಗಳ ತರುವಾಯ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ವೈದ್ಯಕೀಯ ಚಿಕಿತ್ಸೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿ ಆರ್‌ಕೆಎಸ್ ರಾಥೋರ್ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


