ದೇಶ

ಅಸಹಜ ಲೈಂಗಿಕ ಕ್ರಿಯೆ ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರಕ್ಕೆ: ಕಾನೂನು ಸಚಿವರ ಸುಳಿವು

ಅಸಹಜ ಲೈಂಗಿಕ ಕ್ರಿಯೆಯನ್ನು ಕ್ರಿಮಿನಲ್ ಅಪರಾಧದ ವ್ಯಾಪ್ತಿಯಿಂದ ಹೊರಗಿಡುವ ಸುಳಿವನ್ನು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ನೀಡಿದಾರೆ.

ಅಸಹಜ ಲೈಂಗಿಕ ಕ್ರಿಯೆ ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರಕ್ಕೆ: ಕಾನೂನು ಸಚಿವರ ಸುಳಿವು
ಕೇಂದ್ರ ಕಾನೂನು ಸಚಿವ ಸದಾನಂದ ಗೌಡ
Published On :

ನವದೆಹಲಿ: ಅಸಹಜ ಲೈಂಗಿಕ ಕ್ರಿಯೆಯನ್ನು ಕ್ರಿಮಿನಲ್ ಅಪರಾಧದ ವ್ಯಾಪ್ತಿಯಿಂದ ಹೊರಗಿಡುವ ಸುಳಿವನ್ನು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ನೀಡಿದಾರೆ.

ಪ್ರಸ್ತುತ ಜಾರಿಯಲ್ಲಿರುವ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 377 ರ ಪ್ರಕಾರ, ಅಸಹಜ ಲೈಂಗಿಕ ಕ್ರಿಯೆ ಕ್ರಿಮಿನಲ್ ಅಪರಾಧವಾಗಿದೆ. ಕೆಂದ್ರ ಸದಾನಂದ ಗೌಡ ಈ ಬಗ್ಗೆ ಮಾತನಾಡಿದ್ದು, ಸೆಕ್ಷನ್ 377 ನ್ನು ರದ್ದುಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. 377 ಸೆಕ್ಷನ್ ರದ್ದುಗೊಂಡರೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರಗುಳಿಯುತ್ತದೆ.

ಅಮೆರಿಕಾದ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ಸಲಿಂಗಿ ಮದುವೆಗಳನ್ನು ಕಾನೂನು ಬದ್ಧಗೊಳಿಸಿತ್ತು, ಈ ಬೆನ್ನಲ್ಲೇ 377 ಸೆಕ್ಷನ್ ರದ್ದತಿ ಬಗ್ಗೆ ಕೇಂದ್ರ ಕಾನೂನು ಸಚಿವರು ಮಾತನಾಡಿದ್ದು ಅಚ್ಚರಿ ಮೂಡಿಸಿದೆ. ಅಸ್ವಾಭಾವಿಕ ಲೈಂಗಿಕ ಕ್ರಿಯೆಯನ್ನು ಕ್ರಿಮಿನಲ್ ಅಪರಾಧಾದ ವ್ಯಾಪ್ತಿಯ್ಹಿಂದ ಹೊರಗಿಡುವುದರ ಬಗ್ಗೆ ಸಮಗ್ರ ಚರ್ಚೆ ನಡೆಸಿ ಎಲ್ಲಾ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸದಾನಂದ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.