ದೆಹಲಿ ಸರ್ಕಾರದ ಬಳಿ ರು.19,000 ಕೋಟಿ ಬಳಕೆ ಬಗ್ಗೆ ದಾಖಲೆ ಇಲ್ಲ: ಸಿಎಜಿ
ಹಲವಾರು ಯೋಜನೆಗಳ ಅನುಷ್ಠಾನ ಸಂಬಂಧ ಬಿಡುಗಡೆ ಮಾಡಲಾಗಿದ್ದ ರು.19 ಸಾವಿರ ಕೋಟಿ ಬಗ್ಗೆ ದೆಹಲಿ ಸರ್ಕಾರದ ಬಳಿ ಯಾವುದೇ...

ನವದೆಹಲಿ: ಹಲವಾರು ಯೋಜನೆಗಳ ಅನುಷ್ಠಾನ ಸಂಬಂಧ ಬಿಡುಗಡೆ ಮಾಡಲಾಗಿದ್ದ ರು.19 ಸಾವಿರ ಕೋಟಿ ಬಗ್ಗೆ ದೆಹಲಿ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ ಎಂಬುದನ್ನು ಲೇಖಪಾಲರು ಮತ್ತು ಮಹಾಲೆಕ್ಕ ಪರಿಶೋಧಕರ(ಸಿಎಜಿ) ವರದಿ ಹೇಳಿದೆ.
ಮಾರ್ಚ್, 2013ರವರೆಗೆ 5,235 ಅನುದಾನ ಬಿಡುಗಡೆ ಸಂಬಂಧ ರು. 26,434 ಕೋಟಿಗಳನ್ನು ನೀಡಲಾಗಿತ್ತು. ಆದರೆ 4,784 ಅನುದಾನಕ್ಕೆ ರು.19,064 ಕೋಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ದೆಹಲಿ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ.
ಯಾವ ಯಾವ ಯೋಜನೆಗಳಿಗೆ ಎಷ್ಟೆಷ್ಟು ಹಣ ಬಳಕೆಯಾಗಿದೆ ಎಂಬುದರ ಬಗ್ಗೆ ಪ್ರತಿ ಇಲಾಖೆಯೂ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು. ಪ್ರಮಾಣ ಪತ್ರ ಸಲ್ಲಿಕೆಯಾಗದೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಆದರೆ ದೆಹಲಿ ಸರ್ಕಾರದ ಬಳಿ ರು. 19 ಸಾವಿರ ಕೋಟಿ . ಬಳಕೆಯ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಸಿಎಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


