ದೇಶ

ತೀವ್ರಗೊಂಡ ಆಪ್ ಆಂತರಿಕ ಬಿಕ್ಕಟ್ಟು, ಕೇಜ್ರಿವಾಲ್ ಪದಚ್ಯುತಿಗೆ ಯತ್ನ

ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಈ ಸಂಬಂಧ ಚರ್ಚಿಸಲು ಮಾರ್ಚ್ 4ರಂದು ಆಪ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ತೀವ್ರಗೊಂಡ ಆಪ್ ಆಂತರಿಕ ಬಿಕ್ಕಟ್ಟು, ಕೇಜ್ರಿವಾಲ್ ಪದಚ್ಯುತಿಗೆ ಯತ್ನ
ಸಂಜಯ್ ಸಿಂಗ್
Published On :

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು, ಈ ಸಂಬಂಧ ಚರ್ಚಿಸಲು ಮಾರ್ಚ್ 4ರಂದು ಆಪ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ಈ ಕುರಿತು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಪ್ ವಕ್ತಾರ ಸಂಜಯ್ ಸಿಂಗ್, ಆಪ್ ಆಂತರಿಕ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟನೆ ನೀಡಿದರು. ಅಲ್ಲದೆ ಆಂತರಿಕ ಬಿಕ್ಕಟ್ಟಿನಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದರು.

ಇದೇ ವೇಳೆ ಪಕ್ಷದ ಮುಖಂಡರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರು ಅರವಿಂದ್ ಕೇಜ್ರಿವಾಲ್ ಅವರ ಪದಚ್ಯುತಿಗೆ ಯತ್ನಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ನೂತನ ರಾಷ್ಟ್ರೀಯ ಸಂಚಾಲಕರ ನೇಮಕದ ಬಗ್ಗೆಯೂ ಕಾರ್ಯಕಾರಣಿಯಲ್ಲಿ ಚರ್ಚಿಸಲಾಗುವುದು ಎಂದು ಸಂಜಯ್ ಸಿಂಗ್ ತಿಳಿಸಿದರು.

ಇತ್ತೀಗಷ್ಟೇ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಇಬ್ಬರೂ ಕೇಜ್ರಿವಾಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಎಎಪಿ 'ಒಬ್ಬ ವ್ಯಕ್ತಿಯ ಪಕ್ಷ'ವಾಗುತ್ತಿದೆ ಎಂದು ಭೂಷಣ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರಶಾಂತ್‌ ಭೂಷಣ್‌ ಮತ್ತು ಯಾದವ್‌  ಅವರು ಆಮ್‌ ಆದ್ಮಿ ಪಕ್ಷದ ಕಾರ್ಯದರ್ಶಿಗೆ ಬರೆದ ಪತ್ರ ಗಳು ಬಹಿರಂಗವಾಗಿದ್ದು ಪತ್ರದಲ್ಲಿ ಪಕ್ಷದಲ್ಲಿ ಎಲ್ಲವೂ ಏಕಪಕ್ಷಿಯವಾಗಿ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.