ಖಾನ್ ತ್ರಯರ ಸಿನಿಮಾ ನೋಡಬೇಡಿ: ಸಾಧ್ವಿ ಪ್ರಾಚಿ
ಬಾಲಿವುಡ್ ನ ಸ್ಟಾರ್ ನಟರಾದ ಸಲ್ಮಾನ್ ಖಾನ್, ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಸಿನಮಾಗಳನ್ನು ಹಿಂದೂಗಳು ನೋಡಬಾರದು....

ನವದೆಹಲಿ: ಬಾಲಿವುಡ್ ನ ಸ್ಟಾರ್ ನಟರಾದ ಸಲ್ಮಾನ್ ಖಾನ್, ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಸಿನಮಾಗಳನ್ನು ಹಿಂದೂಗಳು ನೋಡಬಾರದು. ಈ ನಟರ ಸಿನಿಮಾಗಳು ಲವ್ ಜೆಹಾದ್ ಅನ್ನು ಪ್ರೋತ್ಸಾಹಿಸುತ್ತಿವೆ ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಆರೋಪಿಸಿದ್ದಾರೆ.
ಭಾನುವಾರ ಡೆಹರಾಡೂನ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾಧ್ವಿ ಪ್ರಾಚಿ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧವೂ ಕಿಡಿಕಾರಿದರು. ಅಲ್ಲದೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ರಾಹುಲ್ ಗಾಂಧಿ ಅವರು ಭಾರತೀಯ ಹುಡುಗಿಯನ್ನೇ ಮದುವೆಯಾಗಬೇಕು ಎಂದು ಹೇಳಿದ್ದಾರೆ.
ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಧ್ವಿ ಪ್ರಾಚಿ ಅವರು, ಈ ಹಿಂದೆ ಹಿಂದೂ ಮಹಿಳೆಯರು ನಾಲ್ಕು ಮಕ್ಕಳನ್ನು ಹೆರಬೇಕು. ಅವುಗಳಲ್ಲಿ ಒಂದನ್ನು ದೇಶದ ಗಡಿ ರಕ್ಷಣೆಗೆ, ಇನ್ನೊಂದನ್ನು ಸಮಾಜ ಸೇವೆಗೆ, ಮತ್ತೂಂದನ್ನು ಸನ್ಯಾಸತ್ವಕ್ಕೆ ಹಾಗೂ ಕೊನೆಯದನ್ನು ವಿಶ್ವ ಹಿಂದೂ ಪರಿಷತ್ ಸೇವೆಗೆ ಕೊಡಬೇಕು ಎಂದು ಹೇಳಿದ್ದರು. ಸಾಧ್ವಿ ಅವರ ಈ ಹೇಳಿಕೆ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಾಧ್ವಿ ಪ್ರಾಚಿ ಅವರು, ದೇಶಕ್ಕೆ ಈ ರೀತಿಯ ವ್ಯವಸ್ಥೆ ಅಗತ್ಯವಿರುವುದರಿಂದ ಹಿಂದೂ ಮಹಿಳೆಯರು ನಾಲ್ಕು ಮಕ್ಕಳನ್ನು ಹೆರಬೇಕೆಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


