ಶೀಲ ಶಂಕಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ
ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗವನ್ನು ಪತ್ನಿಯೇ ಕತ್ತರಿಸಿ ಹಾಕಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ..

ಹೈದರಾಬಾದ್: ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗವನ್ನು ಪತ್ನಿಯೇ ಕತ್ತರಿಸಿ ಹಾಕಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಸತೀಶ್ ಎಂಬಾತ ತನ್ನ ಪತ್ನಿಯ ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದನು. ಪತಿಯ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ನಿನ್ನೆ ಅಂದರೆ ಸೋಮವಾರ ಸತೀಶ್ ಕಂಠಪೂರ್ತಿ ಕುಡಿದು ಮನೆಗೆ ಬಂದು ಮಲಗಿದ್ದಾಗ ಆತನ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾಳೆ. ಬಳಿಕ ಕೂಡಲೇ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮನೆಗೆ ಬೀಗ ಹಾಕಿ ಹೊರಟು ಹೋಗಿದ್ದಾಳೆ. ನೋವಿನಿಂದ ನರಳುತ್ತಿದ್ದ ಸತೀಶ್ ನರಳಾಟವನ್ನು ಕೇಳಿದ ಅಕ್ಕಪಕ್ಕದ ಮನೆಯವರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಸತೀಶನ ಮನೆಯ ಬೀಗವನ್ನು ಹೊಡೆದು ಹಾಕಿ ಕೂಡಲೇ ಆತನನ್ನು ಉಸ್ಮಾನಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಸ್ತುತ ಸತೀಶ್ ನ ಸ್ಥಿತಿ ಚಿಂತಾಜನಕವಾಗಿದ್ದು, ಆತ ಪ್ರಾಣಾಪಾಯದಲ್ಲಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಿತ್ಯ ಕುಡಿದು ಬಂದು ಪತ್ನಿಯನ್ನು ಹಿಂಸಿಸುತ್ತಿದ್ದ ಸತೀಶ್
ಪೊಲೀಸ್ ಮೂಲಗಳ ಪ್ರಕಾರ ಸತೀಶ್ ಹೈದರಾಬಾದಿನ ಆಸಿಫ್ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಮೆಹದಿ ಪಟ್ಟಣಂ ನ ಅಂಬೇಡ್ಕರ್ ನಗರದ ನಿವಾಸಿಯಾಗಿದ್ದು, ಈತ ಕೂಲಿ ಕೆಲಸ ಮಾಡಿಕೊಂಡಿದ್ದನು. ಆತನ ಪತ್ನಿ (ಹೆಸರು ಬಹಿರಂಗಗೊಂಡಿಲ್ಲ) ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಕುಡಿತದ ಚಟಕ್ಕೆ ದಾಸನಾಗಿದ್ದ ಸತೀಶ್ ತನ್ನ ಪತ್ನಿಯ ಶೀಲವನ್ನೇ ಶಂಕಿಸಿ ನಿತ್ಯ ಕುಡಿದು ಬಂದು ಆಕೆಗೆ ದೈಹಿಕ ಹಿಂಸೆ ನೀಡುತ್ತಿದ್ದ.
ಪತಿಯ ನಿತ್ಯ ಕಿರುಕುಳ ತಾಳಲಾರದೆ ಸೋಮವಾರ ಪತ್ನಿ ಆತನನ್ನು ಕೊಲ್ಲಲು ಯತ್ನಿಸಿದ್ದಾಳೆ. ಬಳಿಕ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪರಾರಿಯಾಗಿದ್ದಾಳೆ. ಸತೀಶನ ಸಹೋದರ ನೀಡಿದ ದೂರಿನ ಮೇಲೆ ಪತ್ನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಸೀಫ್‌ನಗರ ಪೊಲೀಸ್ ಠಾಣಾಧಿಕಾರಿ (ಪಿಎಸ್‌ಐ) ಕೆ.ಶ್ರೀಕಾಂತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


