ದೇಶ

ಕಠ್ಮಂಡುವಿನಲ್ಲಿ ವಿಮಾನ ಅಪಘಾತ: ತಪ್ಪಿದ ಭಾರಿ ದುರಂತ

ಕಠ್ಮಂಡುವಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಟರ್ಕಿಷ್ ಮೂಲದ ವಿಮಾನವೊಂದು...

ಕಠ್ಮಂಡುವಿನಲ್ಲಿ ವಿಮಾನ ಅಪಘಾತ: ತಪ್ಪಿದ ಭಾರಿ ದುರಂತ
ತ್ರಿಭುವನ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿರುವ ಟರ್ಕಿಷ್ ವಿಮಾನ (ಸಂಗ್ರಹ ಚಿತ್ರ)
Published On :

ಕಠ್ಮಂಡು: ಕಠ್ಮಂಡುವಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಟರ್ಕಿಷ್ ಮೂಲದ ವಿಮಾನವೊಂದು ವಿಮಾನ ನಿಲ್ದಾಣದ ರನ್ ವೇ ಮೇಲೆ ಅಪ್ಪಳಿಸಿದೆ.

ಟರ್ಕಿಷ್ ಏರ್ ಬಸ್ ಎ330 ವಿಮಾನ ನೆಲಕಪ್ಪಳಿಸಿದ್ದು, ವಿಮಾನದಲ್ಲಿ ಸುಮಾರು 238 ಮಂದಿ ಪ್ರಯಾಣಿಕರು ಇದ್ದರು  ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆ ಪ್ರತೀಕೂಲ ಹವಾಮಾನವೇ ಕಾರಣ ಎಂದು ಹೇಳಲಾಗುತ್ತಿದೆ.

ಕಳೆದ ಹಲವು ದಿನಗಳಿಂದ ಕಠ್ಮಂಡುವಿನಲ್ಲಿ ಸತತ ಮಳೆಯಾಗುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಮಂಜು ಕವಿದ ವಾತಾವರಣಾ ನಿರ್ಮಾಣವಾಗಿತ್ತು. ಈ ವೇಳೆ ಟರ್ಕಿಷ್ ಮೂಲದ ವಿಮಾನ 2 ಬಾರಿ ಲ್ಯಾಂಡಿಂಗ್ ಗೆ ಪ್ರಯತ್ನಿಸಿತಾದರೂ, ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ. ರನ್ ವೇ ಮೇಲೆ ದಟ್ಟ ಮಂಜು ಆವರಿಸಿದ್ದರಿಂದ ರನ್ ವೇ ವಿಮಾನದ ಪೈಲಟ್ ಗೆ ಕಾಣುತ್ತಿರಲಿಲ್ಲ. ಹೀಗಾಗಿ ವಿಮಾನ ಆಯತಪ್ಪಿ ನೆಲಕಪ್ಪಿಳಿಸಿದೆ. ಪರಿಣಾಮ ವಿಮಾನ ದುರಂತಕ್ಕೀಡಾಗಿದೆ.

ಆದರೆ ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಪ್ರಯಾಣಿಕರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.