ಜನತೆಗೆ ಹೋಳಿ ಶುಭಾಶಯ ಕೋರಿದ ಮೋದಿ, ಅನ್ಸಾರಿ
ದೇಶಾದ್ಯಂತ ಹೋಳಿ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ...

ನವದೆಹಲಿ: ದೇಶಾದ್ಯಂತ ಹೋಳಿ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಬಣ್ಣಗಳ ಹೋಳಿ ಹಬ್ಬ ನಿಮ್ಮ ಜೀವನವನ್ನು ಬಣ್ಣಗಳು ತುಂಬಿದ ಸಂತೋಷದ ಜೀವನವನ್ನು ತುಂಬಲಿ ಎಂದು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಹೋಳಿ ಹಬ್ಬ ದೇಶದ ವಿವಿಧತೆಯಲ್ಲಿ ಏಕತೆಯನ್ನು ಸೂಚಿಸು ಸಂಕೇತವಾಗಿದೆ. ಈ ಹಬ್ಬದಲ್ಲಿ ಯಾವುದೇ ಭೇದಭಾವ, ಜಾತಿ ಧರ್ಮ ಇಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಸಂತೋಷದಿಂದ ಬಣ್ಣದೋಕುಳಿ ಆಡುವಂತಹ ಹಬ್ಬವಾಗಿದೆ ಎಂದು ತಮ್ಮ ಟ್ವಿಟರ್ ಖಾತೆಯ ಮೂಲಕ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಎಲ್ಲಾ ಜನತೆಗೂ ಹೋಳಿ ಶುಭಾಶಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


