ದೇಶ

ಮೋದಿ ಭೇಟಿ ಮಾಡಿದ ದೀದಿ, ಹಣಕಾಸು ನೆರವು ಕೋರಿದ ಪ.ಬಂಗಾಳ ಸಿಎಂ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.

ಮೋದಿ ಭೇಟಿ ಮಾಡಿದ ದೀದಿ, ಹಣಕಾಸು ನೆರವು ಕೋರಿದ ಪ.ಬಂಗಾಳ ಸಿಎಂ
ಮಮತಾ ಬ್ಯಾನರ್ಜಿ - ನರೇಂದ್ರ ಮೋದಿ
Published On :

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.

ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಅವರನ್ನು ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಮೂಲಗಳ ಪ್ರಕಾರ, ಮೋದಿ ಕೇಂದ್ರದ ನೆರವಿನ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ಆದರೆ, ಕಲ್ಲಿದ್ದಲು ಹರಾಜು ಮತ್ತು ಗಂಗಾ ಸ್ವಚ್ಛತಾ ಅಭಿಯಾನದಿಂದ ರಾಜ್ಯಕ್ಕೆ ಅನಕೂಲವಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳ ಗರಿಷ್ಠ ಸಾಲದಿಂದ ಬಳಲುತ್ತಿದ್ದು, ಹಣಕಾಸು ನೆರವು ನೀಡುವಂತೆ ಕೇಳಿಕೊಂಡಿದ್ದೇನೆ. ಪ್ರಧಾನಿ ಅವರು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಎನ್‌ಡಿಎ ಸರ್ಕಾರ ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಳ್ಳಲು ಪರದಾಡುತ್ತಿರುವ ಸಂದರ್ಭದಲ್ಲೇ ಮಮತಾ ಬ್ಯಾನರ್ಜಿ ಅವರು ಮೋದಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.