ದೇಶ

ಬಾಂಗ್ಲಾದೇಶದಲ್ಲಿ ಕಟ್ಟಡ ಕುಸಿತ: 5 ಕ್ಕೂ ಹೆಚ್ಚು ಮಂದಿ ಸಾವು, 30 ಗಾಯ

ನಿರ್ಮಾಣ ಹಂತದಲ್ಲಿದ್ದ ಸಿಮೆಂಟ್ ಕಟ್ಟಡವೊಂದು ಕುಸಿದ ಪರಿಣಾಮ ಕಟ್ಟಡದಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, 5 ಮಂದಿ ಸಾವನ್ನಪ್ಪಿರುವ ಘಟನೆ ಢಾಕಾದ ಮೊಂಗ್ಲಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ಬಾಂಗ್ಲಾದೇಶದಲ್ಲಿ ಕಟ್ಟಡ ಕುಸಿತ: 5 ಕ್ಕೂ ಹೆಚ್ಚು ಮಂದಿ ಸಾವು, 30 ಗಾಯ
ಬಾಂಗ್ಲಾದೇಶದಲ್ಲಿ ಸಿಮೆಂಟ್ ಕಟ್ಟಡ ಕುಸಿತ 5 ಮಂದಿ ಸಾವು
Published On :

ಬಾಂಗ್ಲಾದೇಶ: ನಿರ್ಮಾಣ ಹಂತದಲ್ಲಿದ್ದ ಸಿಮೆಂಟ್ ಕಟ್ಟಡವೊಂದು ಕುಸಿದ ಪರಿಣಾಮ ಕಟ್ಟಡದಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, 5 ಮಂದಿ ಸಾವನ್ನಪ್ಪಿರುವ ಘಟನೆ ಢಾಕಾದ ಮೊಂಗ್ಲಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಆಗಮಿಸಿದ್ದು, ಕಟ್ಟಡದಡಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ 30ಕ್ಕೂ ಹೆಚ್ಚು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಟ್ಟಡದಲ್ಲಿ 150 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಮತ್ತಷ್ಟು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವುದಾಗಿ ಶಂಕೆ ವ್ಯಕ್ತವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.