ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ತರಾಟೆ
ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಾಲ್ಮಿಯಾ ಸಿಮೆಂಟ್‍ನ ಪರವಾನಗಿ ವರ್ಗಾವಣೆಗೆ ಅನುಮತಿ ನೀಡಿದ್ದ ಕರ್ನಾಟಕ ಸರ್ಕಾರದ ನಿರ್ಧಾರ ಸುಪ್ರೀಂನ ಕೆಂಗಣ್ಣಿಗೆ ಕಾರಣವಾಗಿದೆ...

ನವದೆಹಲಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಾಲ್ಮಿಯಾ ಸಿಮೆಂಟ್‍ನ ಪರವಾನಗಿ ವರ್ಗಾವಣೆಗೆ ಅನುಮತಿ ನೀಡಿದ್ದ ಕರ್ನಾಟಕ ಸರ್ಕಾರದ ನಿರ್ಧಾರ ಸುಪ್ರೀಂನ ಕೆಂಗಣ್ಣಿಗೆ ಕಾರಣವಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇಂಥ ಕ್ರಮಕ್ಕೆ ಅನುಮೋದನೆ ಮಾಡಿದ ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನ್ಯಾ.ಎಫ್.ಎಂ.ಐ.ಖಲೀಪುಲ್ಲಾ ಮತ್ತು ನ್ಯಾ.ಶಿವಕೀರ್ತಿ ಸಿಂಗ್ ನೇತೃತ್ವದ ಪೀಠ ಈ ಆಕ್ರೋಶ ವ್ಯಕ್ತಪಡಿಸಿದೆ.
1999ರಲ್ಲಿ ದಾಲ್ಮಿಯಾ ಸಿಮೆಂಟ್ ಮತ್ತೊಂದು ಕಂಪನಿಗೆ ತಾನು ಹೊಂದಿದ್ದ ಪರವಾನಗಿಯನ್ನು ಹಸ್ತಾಂತರ ಮಾಡಿತ್ತು. ಈ ಕ್ರಮಕ್ಕೆ ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮೋದನೆ ನೀಡಿತ್ತು. ಅದರ ವಿರುದ್ಧ ಮುನೀರ್ ಎಂಟರ್ ಪ್ರೈಸಸ್ ಕರ್ನಾಟಕ ಹೈಕೋರ್ಟ್ ನಲ್ಲಿ ದಾವೆ ಹೂಡಿತ್ತು. ಅದರ ವಿಚಾರಣೆ ನಡೆಸಿದ್ದ ಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.
ಕಂಪನಿ ಹೈಕೋರ್ಟ್ ನಿರ್ಧಾರದ ವಿರುದ್ಧ ಮುನೀರ್ ಎಂಟರ್‍ಪ್ರೈಸಸ್ ಕರ್ನಾಟಕ ಹೈಕೋರ್ಟ್‍ನಲ್ಲಿ ದಾವೆ ಹೂಡಿತ್ತು. ಅದರ ವಿಚಾರಣೆ ನಡೆಸಿದ್ದ ಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಕಂಪನಿ ಹೈಕೋರ್ಟ್ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ದಾಲ್ಮಿಯಾ ಸಿಮೆಂಟ್ ತಾನು ಹೊಂದಿದ್ದ 331.50 ಹೆಕ್ಟೇರ್ ಜಮೀನಿನ ಪೈಕಿ 196.58 ಎಕರೆಗೆ ಸಂಬಂಧಿಸಿದ ಪರವಾನಗಿಯನ್ನು ಹಸ್ತಾಂತರ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


