ದೇಶ

ಆಪ್ ಸರ್ಕಾರ ಭರವಸೆ ನೀಡುವುದಕ್ಕಷ್ಟೇ ಸೀಮಿತ: ವಿಜೇಂದರ್ ಗುಪ್ತಾ

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು 1 ತಿಂಗಳು ಕಳೆದಿದೆ. ಆದರೆ ನೀಡಿದ್ದ ಭರವಸೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ...

ಆಪ್ ಸರ್ಕಾರ ಭರವಸೆ ನೀಡುವುದಕ್ಕಷ್ಟೇ ಸೀಮಿತ: ವಿಜೇಂದರ್ ಗುಪ್ತಾ
ಬಿಜೆಪಿ ಪಕ್ಷದ ನಾಯಕ ವಿಜೇಂದರ್ ಗುಪ್ತಾ
Published On :

ನವದೆಹಲಿ: ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು 1 ತಿಂಗಳು ಕಳೆದಿದೆ. ಆದರೆ ನೀಡಿದ್ದ ಭರವಸೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ.

ದೆಹಲಿಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಾಗ ಆಮ್ ಆದ್ಮಿ ಪಕ್ಷ ದೆಹಲಿ ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಆರೆಂಜ್ ಕ್ಯಾಟಗರಿಗೆ ಬರುವ ಕಾರ್ಖಾನೆಗಳು ವಾಯು ಮಾಲಿನ್ಯ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಎಂದು ಹೇಳಿತ್ತು. ಆದರೆ ಕಾನೂನು ಬದ್ದವಾಗಿ ಇಂತಹ ನಿರ್ಧಾರಕ್ಕೆ ಅನುಮತಿ ಇಲ್ಲ. ದೆಹಲಿ ಜನರು ಭ್ರಷ್ಟಾಚಾರ ನಿಗ್ರಹ ಸಹಾಯವಾಣಿಗಾಗಿ ಹಲವು ದಿನಗಳಿಂದ ಎದುರು ನೋಡುತ್ತಿದ್ದಾರೆ. ಆಪ್ ಅಧಿಕಾರಕ್ಕೆ ಬಂದು 30 ದಿನಗಳು ಕಳೆದರೂ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಇತ್ತ ಬಿಜೆಪಿ ನಾಯಕರು ಆಪ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೆ. ಅತ್ತ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಮಕೇನ್ ಅವರು, ಕೇವಲ 30 ದಿನಗಳೊಳಗೆ ಸರ್ಕಾರ ಹೀಗೆ ಇದೆ. ಅಭಿವೃದ್ಧಿ ಕಾರ್ಯಗಳು ಹಾಗೂ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಅನಾರೋಗ್ಯದಿಂದಾಗಿ 10 ದಿನಗಳಿಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ರಾಜ್ಯದಲ್ಲಿಲ್ಲ. ಇದೇ ಕಾರಣದಿಂದಲೇ ಕೇಂದ್ರ ಬಜೆಟ್ ನ್ನು ಮುಂದೂಡಲಾಗಿತ್ತು ಎಂದು ಹೇಳುವ ಮೂಲಕ ಆಪ್ ಗೆ ಬೆಂಬಲ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.