ದೆಹಲಿಗೆ ಕೇಜ್ರಿ ವಾಪಸ್
ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 1 2 ದಿನದ ಚಿಕಿತ್ಸೆಯ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಗೆ ಹಿಂತಿರುಗಿದ್ದಾರೆ...

ಬೆಂಗಳೂರು: ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 1 2 ದಿನದ ಚಿಕಿತ್ಸೆಯ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಗೆ ಹಿಂತಿರುಗಿದ್ದಾರೆ.
ಮಧುಮೇಹ ಹಾಗೂ ಕಫ ನಿಯಂತ್ರಣಕ್ಕೆ ಬಂದ ಹಿನ್ನಲೆಯಲ್ಲಿ ಸೋಮವಾರ ಮಧ್ಯಾಹ್ನ ಚಿಕಿತ್ಸಾಲಯದಿಂದ ಬಿಡುಗಡೆಯಾಗಿದ್ದಾರೆ.
ಕೇಜ್ರಿವಾಲ್ ಅವರ ಆರೋಗ್ಯ ಸಮಸ್ಯೆ ನಿಯಂತ್ರಣಕ್ಕೆ ಬಂದಿದ್ದು, ಆರೋಗ್ಯವಾಗಿದ್ದಾರೆ ಎಂದು ಅವರ ಚಿಕಿತ್ಸೆಯ ನೇತೃತ್ವವಹಿಸಿದ್ದ ವೈದ್ಯೆ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮಧ್ಯಾಹ್ನ ಮೂರೂವರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಕೇಜ್ರಿವಾಲ್ ತೆರಳಿದ್ದಾರೆ. 12 ದಿನಗಳ ಕಾಲದಲ್ಲಿ ಆರೋಗ್ಯ ಚೇತರಿಕೆ ಕಂಡಿದ್ದೇನೆ. ಜತೆಗೆ ಮಾನಸಿಕವಾಗಿಯೂ ಸಾಕಷ್ಟು ವಿಚಾರಗಳ ಬಗ್ಗೆ ಆಲೋಚನೆ ಮಾಡಲು ಸಮಯ ಸಿಕ್ಕಂತಾಗಿದೆ ಹೊಸ ಆಲೋಚನೆ ಹಾಗೂ ಹುಮ್ಮಸ್ಸಿನಿಂದ ದೆಹಲಿ ಆಡಳಿತ ಆರಂಭಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಗೆ ಹೋಗುವ ಮುಂಚೆ ಇಸ್ಕಾನ್ ಅಡುಗೆ ಮನೆಗೆ ಭೇಟಿ ನೀಡಿದ ಕೇಜ್ರಿವಾಲ್, ಅಕ್ಷಯ ಪಾತ್ರೆ ಯೋಜನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ದೆಹಲಿಯಲ್ಲೂ ಈ ಯೋಜನೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


