ದೇಶ

ಲೋಕಸಭೆಯಲ್ಲೂ ಪ್ರತಿಧ್ವನಿಸಿದ ರವಿ ನಿಗೂಢ ಸಾವು

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

Published On :

ನವದೆಹಲಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

ಇಂದು ಸಂಸತ್ತಿನಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು, ಐಎಎಸ್ ಅಧಿಕಾರಿ ರವಿ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದು, ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಎಂದು ಆಗ್ರಹಿಸಿದರು.

ಭೂಗಳ್ಳರಿಗೆ ಚಳಿ ಬಿಡಿಸಿದ್ದ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ಸೋಮವಾರ ಸಂಜೆ 7.30ರ ಸುಮಾರಿಗೆ ಸೇಂಟ್ ಜಾನ್ ಆಸ್ಪತ್ರೆ ಸಮೀಪದ ಸೆಂಟ್ ಜಾನ್ಸ್ ಹುಡ್ ಅಪಾರ್ಟ್ ಮೆಂಟ್ ನಲ್ಲಿ ರವಿ ನೇಣಿಗೆ ಶರಣಾಗಿದ್ದಾರೆ ಎಂಬ ಸುದ್ದಿ ಬೆಳಕಿಗೆ ಬಂದಿತ್ತು. ಆದರೆ, ಅವರ ಸಾವಿನ ಸುತ್ತ ನೂರಾರು ಅನುಮಾನಗಳು ಹುಟ್ಟಿಕೊಂಡಿದೆ.

 ಭೂಗಳ್ಳರು ಮತ್ತು ತೆರೆಗೆಗಳ್ಳರ ಗೃಹ ಶೋಧ ಮಾಡಿದ್ದೇ ಅವರ ಅಂತ್ಯಕ್ಕೆ ಕಾರಣವಾಯ್ತೆ ಎಂಬ ಸಂಶಯ ಎಲ್ಲೆಡೆ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.