ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭವನ ಚಲೋ
ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನ ಚಲೋ ಪ್ರತಿಭಟನೆ ನಡೆಸಿ...

ನವದೆಹಲಿ: ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನ ಚಲೋ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಭೂಸ್ವಾಧೀನ ಮಸೂದೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.
ಸಮಾಜವಾದಿ ಪಕ್ಷ, ಸಿಪಿಎಂ, ತೃಣಮೂಲ ಕಾಂಗ್ರೆಸ್ ಸೇರಿದಂತೆ 14 ಪಕ್ಷಗಳ ನೂರು ಮಂದಿ ಶಾಸಕರು ಈ ರಾಷ್ಟ್ರಪತಿ ಭವನ ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ರಾಷ್ಟ್ರಪತಿಗಳಿಗೆ ನಿವೇದನೆ ಪತ್ರ ನೀಡಿದ ಬಳಿಕ ಮಾತನಾಡಿದ ಅವರು ಸೋನಿಯಾ ಗಾಂಧಿ, ದೇಶದ ರೈತರ ಹಿತದೃಷ್ಟಿಯಿಂದ ಪ್ರತಿಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದೆವು ಎಂದು ಹೇಳಿದ್ದಾರೆ.
ಎನ್‌ಡಿಎ ಮಿತ್ರ ಪಕ್ಷಗಳು ಮತ್ತು ವಿರೋಧ ಪಕ್ಷಗಳ ವಿರೋಧ ಲೆಕ್ಕಿಸದೆ ವಿವಾದಿತ ಭೂಸ್ವಾಧೀನ ಮಸೂದೆಗೆ ಲೋಕಸಭೆಯ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿತ್ತು. ಇದರ ವಿರುದ್ಧ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


