ದೇಶ

ಪಕ್ಷದ ಎಲ್ಲಾ ಸ್ಥಾನಗಳಿಗೂ ಪ್ರಶಾಂತ್ ಭೂಷಣ್ ರಾಜಿನಾಮೆ

ಪಕ್ಷದ ಎಲ್ಲಾ ಸ್ಥಾನಗಳಿಗೂ ಪ್ರಶಾಂತ್ ಭೂಷಣ್ ರಾಜಿನಾಮೆ
ಪ್ರಶಾಂತ್ ಭೂಷಣ್,
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಬಂಡಾಯ ನಾಯಕ ಪ್ರಶಾಂತ್ ಭೂಷಣ್ ಅವರು ಬುಧವಾರ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಭಿನ್ನಾಭಿಪ್ರಾಯ ಶಮನಕ್ಕಾಗಿ ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಪಕ್ಷದಲ್ಲಿ ತಾವು ಹೊಂದಿದ್ದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಆಪ್ ಹಿರಿಯ ನಾಯಕ ಸಂಜಯ್ ಸಿಂಗ್ ಅವರು, ಸಮಸ್ಯೆ ಪರಿಹಾರವಾಗುವವರೆಗೂ ಈ ಬಗ್ಗೆ ಪಕ್ಷ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದಿದ್ದಾರೆ. ಅಲ್ಲದೆ ಈ ಬಗ್ಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳುತ್ತಿರುವವರನ್ನೇ ಕೇಳಿ ಎಂದಿದ್ದಾರೆ.

ಸಂಜಯ್ ಸಿಂಗ್, ಕುಮಾರ್ ವಿಶ್ವಾಸ್, ಆಶುತೋಷ್ ಮತ್ತು ಆಶಿಶ್ ಖೆತನ್ ಅವರು ಕೇಜ್ರಿವಾಲ್ ಆಪ್ತರಾಗಿದ್ದು, ಸೋಮವಾರ ರಾತ್ರಿ ಇವರೆಲ್ಲರೂ ಯೇಗೇಂದ್ರ ಯಾದವ್ ಅವನ್ನು ಭೇಟಿ ಮಾಡಿ, ಪಕ್ಷದಲ್ಲಿನ ಆಂತರಿಕ ಕಲಹದ ಕುರಿತು ಚರ್ಚಿಸಿದ್ದರು. ಆದರೆ ಈ ನಿಯೋಗವನ್ನು ಭೇಟಿ ಮಾಡಲು ನಿರಾಕರಿಸಿರುವ ಪ್ರಶಾಂತ್ ಭೂಷಣ್, ತಮ್ಮಲ್ಲಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಕೇಜ್ರಿವಾಲ್ ಅವರನ್ನೇ ಭೇಟಿ ಮಾಡುತ್ತೇನೆ, ಅವರ ಪ್ರತಿನಿಧಿಗಳನ್ನಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.