ಕಲ್ಲಿದ್ದಲು ಹಗರಣ: ಸಿಬಿಐನಿಂದ 39ನೇ ಪ್ರಕರಣ ದಾಖಲು
ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ವಂಚನೆ ಮತ್ತು ಭ್ರಷ್ಟಚಾರ ಪ್ರಕರಣಕ್ಕೆ ಸಂಬಂಧ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)...

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ವಂಚನೆ ಮತ್ತು ಭ್ರಷ್ಟಚಾರ ಪ್ರಕರಣಕ್ಕೆ ಸಂಬಂಧ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) ಹಾಗೂ ಇತರ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಹೊಸ ಪ್ರಕರಣವೊಂದನ್ನು ದಾಖಲಿಸಿದೆ.
ಖಾಸಗಿ ಭಾಗೀದಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಜಂಟಿ ಸಹಭಾಗಿತ್ವದ ನಿಯಮಾವಳಿಗಳನ್ನು ನಿರ್ಲಕ್ಷಿಸಿದ ಆರೋಪ ಕೆಪಿಸಿಎಲ್ ಮೇಲಿದೆ.
2003ರಲ್ಲಿ ಎನ್‌ಡಿಎ ಸರ್ಕಾರದ ಆಡಳಿತಾವಧಿಯಲ್ಲಿ ಕೆಪಿಸಿಎಲ್‌ಗೆ ಕಿಲೋನಿ, ಮನೋರಾ ದೀಪ್‌ನಲ್ಲಿ ತಲಾ ಒಂದು ಹಾಗೂ ಬರಾಂಜ್‌ನಲ್ಲಿ ನಾಲ್ಕು ಸೇರಿದಂತೆ ಒಟ್ಟು ಆರು ನಿಕ್ಷೇಪಗಳನ್ನು ಹಂಚಿಕೆ ಮಾಡಲಾಗಿತ್ತು.
ಪ್ರಕರಣ ಸಂಬಂಧ ಅಧಿಕಾರಿಗಳು, ಬೆಂಗಳೂರು, ನವದೆಹಲಿ, ಕೋಲ್ಕತ್ತ ಹಾಗೂ ನಾಗಪುರ ನಗರಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ಸಿಬಿಐ ತಿಳಿಸಿದೆ.
ಕಲ್ಲಿದ್ದಲು ಹಗರಣ ಸಂಬಂಧ ದಾಖಲಿಸಲಾದ 39ನೇ ಪ್ರಕರಣ ಇದಾಗಿದ್ದು, ಕೆಪಿಸಿಎಲ್ ಅಧಿಕಾರಿಗಳಲ್ಲದೇ, ಕೆಲ ಕಂಪೆನಿಗಳನ್ನು ಆರೋಪಿಗಳಾಗಿ ಪ್ರಕರಣದಲ್ಲಿ ನಮೂದಿಸಲಾಗಿದೆ ಎಂದು ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


