ಕಲ್ಲಿದ್ದಲು ಹಗರಣ: ಮಾಜಿ ಪ್ರಧಾನಿ ಸಿಂಗ್ ಗೆ ಕ್ಲೀನ್ ಚಿಟ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರಾಳ. ತಲಬೀರಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಮನಮೋಹನ್ ಸಿಂಗ್ ಅವರು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರಾಳ. ತಲಬೀರಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಮನಮೋಹನ್ ಸಿಂಗ್ ಅವರು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಸಿಬಿಐ ಹೇಳಿದೆ.
ಪ್ರಕರಣ ಸಂಬಂಧ ಸಿಬಿಐ ಸಿದ್ಧಪಡಿಸಿರುವ ವರದಿಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿಲ್ರಾ ಅವರಿಗೂ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಜತೆಗೆ, ಸಂಪೂರ್ಣ ವಿಚಾರಣೆಯ ಬಳಿಕವೇ ಪ್ರಕರಣವನ್ನು ಪರಿಸಮಾಪ್ತಿಗೊಳಿಸುವುದಾಗಿಯೂ ಕೇಂದ್ರ ತನಿಖಾ ಸಂಸ್ಥೆ ಹೇಳಿದೆ.
ತಲಬೀರಾ-2ರ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ಕಂಡುಬರದ ಹಿನ್ನೆಲೆಯಲ್ಲಿ ಸಿಬಿಐ ಸಿಂಗ್ ಅವರನ್ನು ಮೊದಲು ವಿಚಾರಣೆ ನಡೆಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ಇತ್ತೀಚೆಗಷ್ಟೇ ಮೊದಲ ಬಾರಿಗೆ ಸಿಂಗ್ ರನ್ನು ವಿಚಾರಣೆ ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

