ನವಿ ಮುಂಬೈ ಚರ್ಚ್ ದಾಳಿ ಪ್ರಕರಣ: ನಾಲ್ವರ ಬಂಧನ

ಮುಂಬೈ: ಮೂರು ದಿನಗಳ ನಂತರ ನವಿ ಮುಂಬೈನಲ್ಲಿ ನಡೆದ ಚರ್ಚ್ ದಾಳಿ ಪ್ರಕರಣವನ್ನು ಮುಂಬೈ ಪೊಲೀಸ ಬೇಧಿಸಿದ್ದು, ಪ್ರಕರಣ ಸಂಬಂಧ ಮಂಗಳವಾರ ನಾಲ್ವರನ್ನು ಬಂಧಿಸಿದ್ದಾರೆ.
ಸೇಂಟ್ ಜಾರ್ಜ್ ಕ್ಯಾಥೋಲಿಕ್ ಚರ್ಚ್ ಮೇಲಿನ ದಾಳಿ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ನವಿ ಮುಂಬೈ ಪೊಲೀಸ್ ಆಯುಕ್ತ ಕೆ.ಎಲ್ ಪ್ರಸಾದ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನೀಡಲು ಆಯುಕ್ತರು ನಿರಾಕರಿಸಿದ್ದಾರೆ.
ಪ್ರತಿಪಕ್ಷಗಳ ದಾಳಿಯ ಹಿನ್ನೆಯಲ್ಲಿ ನಿನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಆರೋಪಿಗಳ ಬಂಧನಕ್ಕಾಗಿ ಪೊಲೀಸರಿಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ್ದರು.
ಈ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು, ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದ್ದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಸದನದಿಂದ ಹೊರ ನಡೆದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


