ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ಮಹತ್ವದ ತೀರ್ಪು
ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿ ಮಹತ್ತರ ತೀರ್ಪು ಪ್ರಕಟಿಸಿದೆ...

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ನ್ಯಾಯಾಧೀಶರಾದ ಜೆ. ಚೆಲಮೇಶ್ವರ್ ಮತ್ತು ರೋಹಿಂಗ್ಟನ್ ನಾರಿಮನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿದ ಆದೇಶ ಹೊರಡಿಸಿದೆ.
ಸೆಕ್ಷನ್ 66 ಎ ಗೆ ಸಾಂವಿಧಾನಿಕ ಮಾನ್ಯತೆಯೇ ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಐಟಿ ಕಾಯ್ದೆ ಸೆಕ್ಷನ್ (66) ಎ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾದದ್ದು, ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿರುವಂತದ್ದು ಎಂದು ಆರೋಪಿಸಿ ಸಾರ್ವಜನಿಕ ಹೀತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಶಿವಸೇನಾ ನಾಯಕ ಬಾಳಾ ಠಾಕ್ರೆ ಅವರ ನಿಧನದ ನಂತರ ಮಹಾರಾಷ್ಟ್ರ ಬಂದ್ ಸಮಯದಲ್ಲಿ ಫೇಸ್ ಬುಕನ್ ಲ್ಲಿ ಕಮೆಂಟ್ ದಾಖಲಿಸಿದ್ದ ಇಬ್ಬರು ಯುವತಿಯರ ವಿರುದ್ಧ ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಡಿಯಲ್ಲಿ ಬಂಧಿಸಿಲಾಗಿತ್ತು. ಪ್ರಸ್ತುತ ಈ ಇಬ್ಬರು ವಿದ್ಯಾರ್ಥಿನಿಯರು ಜಾಮೀನು ಮೇಲೆ ಹೊರಬಂದಿದ್ದಾರೆ. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ದೆಹಲಿ ಮೂಲದ ಕಾನೂನು ವಿದ್ಯಾರ್ಥಿನಿ ಶ್ರೇಯಾ ಸಿಂಗಾಲ್ ಅವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಇವರಿಗೆ ವಿವಿಧ ಸಂಘಟನೆಗಳು ಸಾಥ್ ನೀಡಿದ್ದವು.
ಸಾಮಾಜಿಕ ಜಾಲತಾಣಗಳಲ್ಲಿ ಕಿರಿಕಿರಿ ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ಬಿತ್ತರಿಸುವವರನ್ನು ಬಂಧಿಸಲು ಆಸ್ಪದ ನೀಡುವ ಮಾಹಿತಿ ತಂತ್ರಜ್ಞಾನ ಕಾಯ್ದೆ(ಐಟಿ ಕಾಯ್ದೆ) ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರ ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋಟ್ರ್ ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.
ಈ ಕಾಯ್ದೆಯಡಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಬಿತ್ತರಿಸುವವರನ್ನು ಬಂಧಿಸುವ ಅವಕಾಶವೂ ಇದೆ.ಹೀಗಾಗಿ ಈ ಕಾಯ್ದೆಯು ಅಂತರ್ಜಾಲ ಬಳಕೆದಾರರ ಸ್ವಾತಂತ್ರ್ಯವನ್ನು ಹತ್ತಿಕ್ಕಲಿದೆ ಎಂದು ಆರೋಪಿಸಿ ಸಾಕಷ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳೂ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದವು.
ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕ ದಾಳಿಯ ನಂತರ ಐಟಿ ಕಾಯ್ದೆಯನ್ನು ಆತುರವಾಗಿ ತಿದ್ದುಪಡಿ ಮಾಡಲಾಗಿತ್ತು. 2008ರ ಡಿಸೆಂಬರ್ 22ರಂದು ಇದನ್ನು ಲೋಕಸಭೆ ಅಂಗೀಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


