ಏ.9ರಿಂದ 16ರ ವರೆಗೆ ಪ್ರಧಾನಿ ವಿದೇಶ ಪ್ರವಾಸ: ಫ್ರಾನ್ಸ್, ಜರ್ಮನ್ ಕೆನಡಾಗೆ ಮೋದಿ ಭೇಟಿ

ನವದೆಹಲಿ (ಪಿಟಿಐ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎಂಟು ದಿನಗಳ ವಿದೇಶ ಪ್ರವಾಸ ಏಪ್ರಿಲ್ 9ರಿಂದ ಆರಂಭವಾಗಲಿದ್ದು, ಈ ವೇಳೆ ಅವರು ಫ್ರಾನ್ಸ್, ಜರ್ಮನಿ ಹಾಗೂ ಕೆನಡಾ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಿಂದ 16ರ ವರೆಗೆ ಮೂರು ರಾಷ್ಟ್ರಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಅವರು ತಿಳಿಸಿದ್ದಾರೆ.
ಮೋದಿಗಾಗಿ ಕೆನಡಾದ ಟೊರೊಂಟೊ ನಗರದಲ್ಲಿ ಅಮೆರಿಕದ ಮ್ಯಾಡಿಸನ್ ಚೌಕದಲ್ಲಿ ನಡೆದಂಥ ಬೃಹತ್ ಕಾರ್ಯಕ್ರಮ ನಡೆಯುವ ನಿರೀಕ್ಷೆಗಳಿವೆ.
ನಿಗದಿತ ಪ್ರವಾಸದಲ್ಲಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್, ಜರ್ಮನಿಯ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಹಾಗೂ ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪೆರ್ ಅವರನ್ನು ಭೇಟಿ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


