ದೇಶ

62ನೇ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ

ದೇಶದ ಪ್ರತಿಷ್ಠಿತ 62ನೇ ರಾಷ್ಟ್ರಪ್ರಶಸ್ತಿ ವಿಜೇತ ಪ್ರಶಸ್ತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಾಗೂ ದೇಶದ ಎಲ್ಲಾ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ...

62ನೇ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ  ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :

ಕೋಲ್ಕತಾ: ದೇಶದ ಪ್ರತಿಷ್ಠಿತ 62ನೇ ರಾಷ್ಟ್ರಪ್ರಶಸ್ತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಾಗೂ ದೇಶದ ಎಲ್ಲಾ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತಂತೆ ಇಂದು ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ ಅವರು, ಎಲ್ಲಾ ಬಂಗಾಳ ಸೇರಿದಂತೆ ಭಾರತದಾದ್ಯಂತ ಸಾಕಷ್ಟು ಮಂದಿಯಲ್ಲಿ ಕಲಾಜ್ಞಾನವಿದೆ. 62ನೇ ರಾಷ್ಟ್ರಪ್ರಶಸ್ತಿ ವಿಜೇತರಿಗೆ ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ.

62ನೇ ರಾಷ್ಟ್ರಪ್ರಶಸ್ತಿ ಪ್ರಕಟಣೆಯಲ್ಲಿ ಬಂಗಾಳದ ಚೊಟುಶ್ಕೋನೆ ಎಂಬ ಚಿತ್ರದ ಉತ್ತ್ಯುತ್ತಮ ನಿರ್ದೇಶನಕ್ಕಾಗಿ ಶ್ರೀಜಿತ್ ಮುಖರ್ಜಿ ಅವರಿಗೆ ಪ್ರಶಸ್ತಿ ಲಭಿಸಿದೆ, ಅಲ್ಲದೆ, ಇದೇ ಚಿತ್ರಕ್ಕೆ ಅತ್ಯುತ್ತಮ ಛಾಯಾಗ್ರಹಣಕ್ಕಾಗಿ ಸುದೀಪ್ ಛಟರ್ಜಿ ಅವರಿಗೂ ರಾಷ್ಟ್ರಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.