ಕಾಶ್ಮೀರ ಸಮಸ್ಯೆ ಬಂದೂಕಿನಿಂದ ಪರಿಹಾರವಾಗಲ್ಲ: ಒಮರ್ ಅಬ್ದುಲ್ಲಾ
ಬಂದೂಕಿನಿಂದ ಕಾಶ್ಮೀರ ವಿವಾದ ಬಗೆಹರಿಯಲ್ಲ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ...
ಜಮ್ಮು-ಕಾಶ್ಮೀರ: ಬಂದೂಕಿನಿಂದ ಕಾಶ್ಮೀರ ವಿವಾದ ಬಗೆಹರಿಯಲ್ಲ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.
ಕಾಶ್ಮೀರ ವಿವಾದವನ್ನು ಬಂದೂಕು ಹಿಡಿದು ಬಗೆಹರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನಡೆದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಮಾತುಕತೆಯಿಂದ ಬಗೆಹರಿಸಬೇಕು ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಆರು ವರ್ಷಗಳಿಂದ ಮಾತುಕತೆಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳೋನ ಎಂದು ನಾನು ಹೇಳುತ್ತಾ ಬಂದಿದ್ದೇನೆ. ಅದೇ ಹೇಳಿಕೆಯನ್ನಾ ಈಗ ಪಿಡಿಪಿ ನೀಡುತ್ತಿದೆ. ಆದರೆ, ಈ ಹೇಳಿಕೆಗಳು ಹೊಸದೇನು ಅಲ್ಲ ಎಂದಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನಾಚರಣೆಗಳಲ್ಲಿ ನನ್ನ ಭಾಷಣದಲ್ಲಿ ಈ ವಿವಾದವನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಲೋನ ಎಂದು ಹೇಳುತ್ತಾ ಬಂದಿದ್ದೇನೆ. ಈಗಲೂ ಹೇಳುತ್ತೇನೆ, ಬಂದೂಕು ಹಿಡಿದು ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದರೆ, ಅದರಿಂದ ಪರಿಹಾರ ಸಿಗುವುದಿಲ್ಲ ಎಂದು ಒಮರ್ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

