ದೇಶ

ಸಿಬಿಐಗೆ ನನ್ ರೇಪ್ ಪ್ರಕರಣ: ಪ.ಬಂಗಾಳ ಮನವಿ ತಿರಸ್ಕರಿಸಿದ ಕೇಂದ್ರ

ನಾಡಿಯಾ ಜಿಲ್ಲೆಯ 71 ವರ್ಷದ ನನ್ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಿಬಿಐ ಸಿಫಾರಸು ಮಾಡಿದ್ದ ಪಶ್ಚಿಮ ಬಂಗಾಳ...

ಸಿಬಿಐಗೆ ನನ್ ರೇಪ್ ಪ್ರಕರಣ: ಪ.ಬಂಗಾಳ ಮನವಿ ತಿರಸ್ಕರಿಸಿದ ಕೇಂದ್ರ
Published On :

ನವದೆಹಲಿ: ನಾಡಿಯಾ ಜಿಲ್ಲೆಯ 71 ವರ್ಷದ ನನ್ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಿಬಿಐ ಸಿಫಾರಸು ಮಾಡಿದ್ದ ಪಶ್ಚಿಮ ಬಂಗಾಳ ಸರ್ಕಾರದ ಮನವಿಯನ್ನು ಶುಕ್ರವಾರ ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಗ್ಯಾಂಗ್‌ರೇಪ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಪಶ್ಚಿಮ ಬಂಗಾಳ ಸರ್ಕಾರ ಮಾಡಿದ್ದ ಶಿಫಾರಸಿನ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು, ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಗಮನಿಸಿ ಸಿಬಿಐ ತನಿಖೆಗೆ ಶಿಫಾರಸು ಮಾಡಿರುವುದಾಗಿ ಕಳೆದ ಮಾರ್ಚ್ 19ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದರು. ಅಲ್ಲದೆ ಈ ಸಂಬಂಧ ಕೇಂದ್ರದ ತನಿಖಾ ಸಂಸ್ಥೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು.

ಈ ಮಧ್ಯೆ, ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಎರಡನೇ ಆರೋಪಿ ಗೋಪಾಲ್ ಸರ್ಕಾರ್‌ನನ್ನು ಇಂದು ಪಶ್ಚಿಮ ಬಂಗಾಳ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.