ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿ, ತನ್ನನ್ನು ವಿರೋಧಿಸುವ ಜನರನ್ನು ಲೈಕ್ ಮಾಡಲ್ಲ: ಭೂಷಣ್
ಆಮ್ ಆದ್ಮಿ ಪಕ್ಷ(ಎಎಪಿ)ದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು, ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿಯಾಗಿದ್ದು,...

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು, ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿಯಾಗಿದ್ದು, ಅವರು ತನ್ನನ್ನು ವಿರೋಧಿಸುವ ಜನರನ್ನು ಇಷ್ಟಪಡುವುದಿಲ್ಲ ಎಂದು ಬಂಡಾಯ ನಾಯಕ ಪ್ರಶಾಂತ್ ಭೂಷಣ್ ಅವರು ಶುಕ್ರವಾರ ಹೇಳಿದ್ದಾರೆ.
ಬಂಡಾಯ ನಾಯಕರಾದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್ ಅವರು ಇಂದು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಇಬ್ಬರೂ ನಾಯಕರು ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಮ್ಮ ಪಕ್ಷದಿಂದ ಜನರು ತುಂಬಾ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆದರೆ ಆಪ್ ಕೂಡ ಬೇರೆ ಪಕ್ಷಗಳ ರೀತಿ ಆಗುತ್ತಿದೆ. ಪಾರದರ್ಶಕತೆಯನ್ನು ಪ್ರಶ್ನಿಸುವ ಮತ್ತು ಆಂತರಿಕ ಪ್ರಜಾಪ್ರಭುತ್ವದ ಕುರಿತಂತೆ ಕನಿಷ್ಠ ಚರ್ಚೆ ನಡೆಸುವ ಏಕೈಕ ಪಕ್ಷ ಎಎಪಿಯಾಗಿತ್ತು. ಆದರೆ ಈಗ ಅದನ್ನು ನಾವು ಕಳೆದುಕೊಂಡಿದ್ದೇವೆ ಎಂದು ಯಾದವ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


