ವಾಜಪೇಯಿ ಅಂತಾರಾಷ್ಟ್ರೀಯ ಹೆಗ್ಗುರುತು: ರಾಜನಾಥ್ ಸಿಂಗ್
ನಮ್ಮ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತಕ್ಕಷ್ಟೇ ಸೀಮಿತವಾದ ವ್ಯಕ್ತಿಯಲ್ಲ. ಅವರು ಅಂತರರಾಷ್ಟ್ರೀಯ ವ್ಯಕ್ತಿಯೂ ಕೂಡ ಹೌದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ನಮ್ಮ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತಕ್ಕಷ್ಟೇ ಸೀಮಿತವಾದ ವ್ಯಕ್ತಿಯಲ್ಲ ಅವರು ಅಂತರರಾಷ್ಟ್ರೀಯ ವ್ಯಕ್ತಿಯೂ ಕೂಡ ಹೌದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
ಮಾಜಿ ಪ್ರಧಾನಿ ಅಟರ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿರುವ ಹಿನ್ನೆಲೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜನಾಥ್ ಸಿಂಗ್ ಅವರು, ವಾಜಪೇಯಿ ಅವರು ಇಂದಿಗೂ ಎಲ್ಲರಿಗೂ ಪ್ರೀತಿಪಾತ್ರರಾದ ವ್ಯಕ್ತಿ, ಅವರ ಮೇಲಿರುವ ಗೌರವ ಎಂದಿಗೂ ಕಡಿಮೆಯಾಗುವಂತಹದ್ದಲ್ಲ. ವಾಜಪೇಯಿ ಅವರು ಭಾರತ ವ್ಯಕ್ತಿಯಷ್ಟೇ ಅಲ್ಲ, ಅವರು ಅಂತರಾಷ್ಟ್ರೀಯ ವ್ಯಕ್ತಿ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದು, ವಾಜಪೇಯಿ ಅವರ ನಿವಾಸದಲ್ಲೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ನೇತಾರ ಸಂದೀಪ್ ದೀಕ್ಷಿತ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


