ದೇಶ

ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ: ಇಬ್ಬರ ಬಂಧನ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿರುವ ಇಬ್ಬರು ವ್ಯಕ್ತಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದು, ಕಾಯ್ದೆ ಜಾರಿಯಾದ ನಂತರ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ...

ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ: ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :

ನಶೀಕ್: ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿರುವ ಇಬ್ಬರು ವ್ಯಕ್ತಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದು, ಕಾಯ್ದೆ ಜಾರಿಯಾದ ನಂತರ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ.

ಮುನ್ಶಿದ್ ನಗರದ ನಿವಾಸಿಗಳಾದ ಮಹಮ್ಮದ್ ರಶೀದ್ (36) ಮತ್ತು ಅಬ್ದುಲ್ ಅಹದ್ ಮಹಮ್ಮದ್ ಇಶಾಕ್ ಅಲಿಯಾಸ್ ಹಮೆದ್ ಲೆಂಡಿ (28) ಬಂಧಿತ ಆರೋಪಿಗಳು. ಅಕ್ರಮವಾಗಿ ಎರಡು ಹಸುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ವಾಹನ ತಡೆಹಿಡಿದಿದ್ದಾರೆ. ಈ ವೇಳೆ ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದಾಗಿ ತಿಳಿದು ಬಂದಿದೆ. ನಂತರ ಇಬ್ಬರು ಆರೋಪಿಗಳನ್ನು ಮೆಲ್ ಗಾಂವ್ ಪೊಲೀಸರು ಬಂಧಿಸಿದ್ದಾರೆ.

ಪರ-ವಿರೋಧದ ನಡುವೆಯೂ ಮಹಾರಾಷ್ಟ್ರ ಸರ್ಕಾರ ಮಾರ್ಚ್ 3 ರಂದು ಮಹಾರಾಷ್ಟ್ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡುವವರ ವಿರುದ್ಧ ನಿಷೇಧ ಹೇರಿತ್ತು. ಕಾಯ್ದೆ ಪ್ರಕಾರ ಗೋ ಮಾಂಸ ಮಾರಾಟ ಮಾಡುವವರ ವಿರುದ್ಧ 5 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ತೆರುವಂತೆ ಮಹಾರಾಷ್ಟ್ರ ಸರ್ಕಾರ ಗೋಹತ್ಯೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.