ದೇಶ

ಮೋದಿ ಆಗಮನಕ್ಕೆ ರಸ್ತೆಗೆ ಸ್ವಚ್ಛತೆ ಭಾಗ್ಯ

ಬೆಂಗಳೂರಿನಲ್ಲಿ ಏ.2ರಿಂದ 4ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ...

ಮೋದಿ ಆಗಮನಕ್ಕೆ ರಸ್ತೆಗೆ ಸ್ವಚ್ಛತೆ ಭಾಗ್ಯ
ಪ್ರಧಾನಿ ನರೇಂದ್ರ ಮೋದಿ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಏ.2ರಿಂದ 4ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಿಗೆ ಮತ್ತೆ ಸ್ವಚ್ಛತೆ ಭಾಗ್ಯ ಲಭಿಸಲಿದೆ.

ಈ ಕುರಿತು ಶುಕ್ರವಾರ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ಧತೆ ಬಗ್ಗೆ ಚರ್ಚೆ ನಡೆದಿದ್ದು, ಐಎಎಸ್ ಭಾಷೆಯಲ್ಲಿ ಟುಬಿಕೆಪ್ಟ್ ಆಲ್ ರೋಡ್ ನೀಟಿ ಆಂಡ್ ಟೈಡಿ...ಎಂಬ ಸದೇಶ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಎಲ್ಲ ಕಾರ್ಯಕ್ರಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸೂಚನೆ ನೀಡಲಾಗಿದ್ದು, ಬೆಸ್ಕಾಂ ಎಂಡಿ, ಕಾರ್ಯಕ್ರಮದ ಸಂಘಟಕರು ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಸೂಚನೆ ನೀಡಲಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ನಗರದ ಎಲ್ಲರಸ್ತೆಗಎಳು ಮತ್ತು ಬೀದಿಗಳು (ಪ್ರಧಾನಿ ಸಂಚರಿಸುವ ಮಾರ್ಗ ಮಾತ್ರ ಎಂಬುದನ್ನು ಓದುಗರು ಗಮನದಲ್ಲಿಟ್ಟುಕೊಳ್ಳಬೇಕು) ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಭೆಯಲ್ಲಿ ಸಲಹೆ ನೀಡಲಾಗಿದ್ದು, ಕಾರ್ಯಕ್ರಮ ಸಂಘಟಕರಿಗೂ ಸ್ವಚ್ಛತೆ ಬಗ್ಗೆ ಗಮನ ನೀಡುವಂತೆ ಸೂಚಿಸಲಾಗಿದೆ. ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪ್ರಧಾನಿ ಸಂಚರಿಸುವ ಪ್ರದೇಶದ ಸ್ವಚ್ಛತೆ ಜವಾಬ್ದಾರಿ ನೀಡಲಾಗಿದೆ.

ಸ್ವಾಗತಕ್ಕೆ ಸರ್ಕಾರವಿಲ್ಲ: ಪ್ರಧಾನಿಯವರು ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸುವುದರಿಂದ ಸ್ವಾಗತಕ್ಕೆ ಸರ್ಕಾರದ ವತಿಯಿಂದ ಮುಖ್ಯಮಂತ್ರಿಗಳಾಗಲಿ, ಸಚಿವರಾಗಲಿ ಹೋಗುವುದಿಲ್ಲ. ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಧಿಕಾರಿಗಳ ಜತೆ ತೆರಳಿದ್ದಾರೆ. ಪ್ರಧಾನಿ ಸಂಚಾರ ಜವಾಬ್ದಾರಿ ಡಿಪಿಎಆರ್ ಕಾರ್ಯದರ್ಶಿ, ಸಾರಿಗೆ ಆಯುಕ್ತರು, ಭದ್ರತಾ ವಿಭಾಗದ ಡಿಐಜಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಶಿಷ್ಟಾಚಾರ ವಿಭಾಗದ ಇಬ್ಬರು ಅಧಿಕಾರಿಗಳಿಗೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.