ಬಿಜೆಪಿ ಈಗ ವಿಶ್ವದ ಅತಿ ದೊಡ್ಡ ಪಕ್ಷ
ಆಡಳಿತಾರೂಢ ಬಿಜೆಪಿ ಈಗ ವಿಶ್ವದಲ್ಲೇ ಅತಿ ದೊಡ್ಡ ಪಕ್ಷ. ಅದರ ಒಟ್ಟು ಸದಸ್ಯರ ಸಂಖ್ಯೆ 8.8 ಕೋಟಿ. ಚೀನಾದ ಕಮ್ಯುನಿಸ್ಟ್ ಪಕ್ಷವನ್ನೂ...

ನವದೆಹಲಿ: ಆಡಳಿತಾರೂಢ ಬಿಜೆಪಿ ಈಗ ವಿಶ್ವದಲ್ಲೇ ಅತಿ ದೊಡ್ಡ ಪಕ್ಷ. ಅದರ ಒಟ್ಟು ಸದಸ್ಯರ ಸಂಖ್ಯೆ 8.8 ಕೋಟಿ. ಚೀನಾದ ಕಮ್ಯುನಿಸ್ಟ್ ಪಕ್ಷವನ್ನೂ ಅದು ಮೀರಿಸಿದೆ ಎಂದು ಬಿಜೆಪಿ ನಾಯಕರೇ ಭಾನುವಾರ ಹೇಳಿಕೊಂಡಿದ್ದಾರೆ. ಈ ತಿಂಗಳ 10 ಕೋಟಿ ಸದಸ್ಯರನ್ನು ನೇಮಕ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ಗುರಿ ಹಾಕಿಕೊಂಡಿ ದ್ದಾರೆ. ಅದರಂತೆ ಕಳೆದ ವರ್ಷದ ನ.1 ರಂದು ನರೇಂದ್ರ ಮೋದಿ ದೆಹಲಿಯಲ್ಲಿ ಬಹುಹಂತದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ಅದರಂತೆ ಕರ್ನಾಟಕ ಸೇರಿ ದೇಶಾದ್ಯಂತ ಪಕ್ಷದ ನಾಯಕರು ಸದಸ್ಯತ್ವ ಅಭಿಯಾನ ಆರಂಭಿಸಿದ್ದರು. ಟ್ವಿಟರ್, ಫೇಸ್ ಬುಕ್ ಸೇರಿದಂತೆ ಪ್ರಮುಖ ಜಾಲ ತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿತ್ತು. ಸದಸ್ಯತ್ವ ಪಡೆಯಲು ಮೊಬೈಲ್ ಸಂಖ್ಯೆಯನ್ನೂ ಆರಂಭಿಸಲಾಗಿತ್ತು. ಸದಸ್ಯರಾಗ ಬಯಸುವವರುಅದಕ್ಕೆ ಡಯಲ್ ಮಾಡಿ ಸದಸ್ಯರಾಗುವವಿಧಾನವನ್ನು ಪರಿಚಯಿಸ ಲಾಗಿದೆ.
ಇಂದು ಚಾಲನೆ: ಸೋತು ಸುಣ್ಣವಾಗಿರುವ ಕಾಂಗ್ರೆಸ್ ಕೂಡ ಬಿಜೆಪಿ ಮಾದರಿಯಲ್ಲಿ ಹೈಟೆಕ್ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯಲ್ಲಿ ಕಾಂಗ್ರೆಸ್‍ನ ಆನ್‍ಲೈನ್ ಸದಸ್ಯತ್ವಕ್ಕೆ ಚಾಲನೆ ನೀಡಲಿದ್ದಾರೆ. ಪಕ್ಷದಲ್ಲಿ ಅವರು ಹೊಂದಿರುವ ಸದಸ್ಯತ್ವದ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಅವರು ಆನ್‍ಲೈನಲ್ಲಿ ಸದಸ್ಯತ್ವ ನವೀಕರಣಕ್ಕೆಅರ್ಜಿ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


