ನೆರೆಪೀಡಿತರಿಗೆ ಪರಿಹಾರ: ಕೇಂದ್ರದ ಕ್ರಮಕ್ಕೆ ಒಮರ್ ಅಬ್ದುಲ್ಲಾ ಅಸಮಾಧಾನ
ಕಾಶ್ಮೀರದಾದ್ಯಂತ ಪ್ರವಾಹ ಸಂಭವಿಸಿದ ಹಿನ್ನೆಲೆಯಲ್ಲಿ ನೆರೆಪೀಡಿತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ತಡ ಮಾಡುತ್ತಿರುವುದರ ಕುರಿತು ಮಾಜಿ ಜಮ್ಮು ಮತ್ತಿ ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ...
ಜಮ್ಮು: ಕಾಶ್ಮೀರದಾದ್ಯಂತ ಪ್ರವಾಹ ಸಂಭವಿಸಿದ ಹಿನ್ನೆಲೆಯಲ್ಲಿ ನೆರೆಪೀಡಿತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ತಡ ಮಾಡುತ್ತಿರುವುದರ ಕುರಿತು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಇಂದು ಸಂಸತ್ ನಲ್ಲಿ ಮಾತನಾಡಿರುವ ಮಾಜಿ ಜಮ್ಮು ಮತ್ತಿ ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ನೆರೆಪೀಡಿತ ಪ್ರದೇಶಗಳಿಗೆ ಸರ್ಕಾರ ಯಾವ ರೀತಿಯ ಪರಿಹಾರ ಯೋಜನೆಗಳನ್ನು ತೆಗೆದುಕೊಂಡಿದೆ ಎಂಬುದನ್ನು ತಿಳಿಯಬೇಕಿದೆ. ಪ್ರವಾಹ ಸಂದರ್ಭದಲ್ಲಿ ಅಧಿಕಾರಿಗಳು ರಾಜಕೀಯ ಆಟ ಆಡುವುದು ಸರಿಯಲ್ಲ. ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದಾರೆ. ಅವರ ಜೀವವನ್ನು ಕಾಪಾಡಬೇಕಾದದ್ದು ನಮ್ಮ ಜವಬ್ದಾರಿ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನೆರೆಪೀಡಿತ ಜನರಿಗೆ ನೀಡುವಂತಹ ಪರಿಹಾರವು ಅವರಿಗೆ ತೃಪ್ತಿ ತರುವಂತಿರಬೇಕು. ಪ್ರಸ್ತುತ ನೆರೆಪೀಡಿತ ಪ್ರದೇಶದ ಜನರ ಜೀವನ ಸಂಕಷ್ಟದಲ್ಲಿದ್ದು, ಸರ್ಕಾರ ತಡ ಮಾಡದೆ ಪರಿಹಾರ ಧನ ನೀಡಬೇಕಿದೆ. ಸಂದರ್ಭ, ಸನ್ನಿವೇಶಗಳು ಹೀಗೆ ಇರುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಯಾವಾಗ ಯಾವ ಪರಿಸ್ಥಿತಿ ಬಂದೊದಗುತ್ತದೆ ಎಂಬುದು ತಿಳಿಯುವುದಿಲ್ಲ. ಮತ್ತೆ ಮಳೆ ಹೆಚ್ಚಾದರೂ ಆಶ್ಚರ್ಯವಿಲ್ಲ ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.
ಮೊದಲು ಸರ್ಕಾರದಿಂದ ಮಾಹಿತಿ ಪಡೆಯಬೇಕಿರುವ ನಮಗೆ ಇತ್ತೀಚಿನ ದಿನಗಳಲ್ಲಿ ಅಂತರ್ಜಾಲ ಹಾಗೂ ಪತ್ರಿಕೆಗಳಿಂದ ಮಾಹಿತಿ ಪಡೆಯುವಂತಹ ಸಂದರ್ಭ ಬಂದೊದಗಿದೆ. ಎನ್ ಡಿಆರ್ಎಫ್ ತಂಡ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿದೆ. ಎನ್ ಡಿಆರ್ಎಫ್ ತಂಡ ಸ್ಥಳಕ್ಕೆ ಭೇಟಿ ನೀಡಿದೆಯೋ ಇಲ್ಲವೋ ಎಂಬುದರ ಕುರಿತಂತೆ ನನಗೆ ಸರ್ಕಾರದಿಂದ ಖಚಿತ ಮಾಹಿತಿಬೇಕು ಮತ್ತು ಪ್ರವಾಹದಿಂದ ಗಂಭೀರವಾಗಿ ಗಾಯಗೊಂಡವರಿಗೆ ಆಸ್ಪತ್ರೆ ಸೌಲಭ್ಯ ಹಾಗೂ ವೈದ್ಯಕೀಯ ಚಿಕಿತ್ಸೆ ಕುರಿತಂತೆ ಸರ್ಕಾರದಿಂದ ಮಾಹಿತಿ ತಿಳಿಯಬೇಕಿದೆ ಎಂದು ತಮ್ಮ ಕಳವಳವನ್ನು ಒಮರ್ ಅಬ್ದುಲ್ಲಾ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

