ದೇಶ

ಪಾಟ್ನಾ: ಫ್ಲಾಟ್ ನಲ್ಲಿ ಬಾಂಬ್ ಸ್ಫೋಟ

ವಸತಿ ಪ್ರದೇಶದ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ಮಂಗಳವಾರ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ...

ಪಾಟ್ನಾ: ಫ್ಲಾಟ್ ನಲ್ಲಿ ಬಾಂಬ್ ಸ್ಫೋಟ
ಸಾಂದರ್ಭಿಕ ಚಿತ್ರ
Published On :

ಪಾಟ್ನಾ: ವಸತಿ ಪ್ರದೇಶದ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ಮಂಗಳವಾರ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.

ಪಾಟ್ನಾ ಬಳಿಯ ಬಹಾದ್ದೂರ್‌ಪುರ ಪ್ರದೇಶದಲ್ಲಿರುವ ವಸತಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಫ್ಲ್ಯಾಟ್ ಒಂದರಲ್ಲಿ ಈ ಸ್ಫೋಟ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಈ ಈ ಸ್ಫೋಟದಲ್ಲಿ ನಾಲ್ಕು ಮಂದಿ ಪವಾಡ ಸದೃಶವಾಗಿ ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕೆ ದಾವಿಸಿದ ಪೊಲೀಸರು ಸ್ಥಳದಲ್ಲಿದ್ದ ಹಲವು ಕಚ್ಚಾ ವಸ್ತುಗಳನ್ನು, ಪೆಟ್ರೋಲ್ ಬಾಟ್‌ಗಳು, ಕತ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಯಾರೋ ಬಾಂಬ್ ತಯಾರಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದು, ಪ್ರದೇಶದಲ್ಲಿ ಬಿಗಿಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.