ಬಿಡುಗಡೆಯಾದಂದೇ ಆಲಂಗೆ ಬಂದಿತ್ತು 50 ಪಾಕ್ ಕರೆಗಳು!
ಮಾ.7ರಂದು ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆತನಿಗೆ ಪಾಕಿಸ್ತಾನದಿಂದ ಕರೆಗಳ ಮಹಾಪೂರವೇ...

ನವದೆಹಲಿ: ಮಾ.7ರಂದು ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆತನಿಗೆ ಪಾಕಿಸ್ತಾನದಿಂದ ಕರೆಗಳ ಮಹಾಪೂರವೇ ಹರಿದುಬಂದಿತ್ತಂತೆ.
ಮಸಾರತ್ ಆಲಂ ಅಂದು ಪಾಕ್‍ನಿಂದ ಬಂದ 50 ಕರೆಗಳನ್ನು ಸ್ವೀಕರಿಸಿದ್ದು, ಇವುಗಳನ್ನು ಮಾಡಿದವರು ಲಷ್ಕರ್ -ಎ-ತೊಯ್ಬಾ ಉಗ್ರರು ಎಂದು ಭದ್ರತಾ ಸಂಸ್ಥೆಗಳು ಮಾಹಿತಿ ನೀಡಿವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ವರದಿ ನೀಡಿರುವ ಭದ್ರತಾ ಸಂಸ್ಥೆಗಳು, ಕಾಶ್ಮೀರ ಕಣಿವೆಯಲ್ಲಿ ಅಶಾಂತಿ ಸೃಷ್ಟಿಸುವುದೇ ಉಗ್ರರ ಉದ್ದೇಶವಾಗಿತ್ತು ಎಂದಿವೆ.
ಇತ್ತೀಚೆಗಷ್ಟೇ ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಅಲಿ ಶಾ ಗಿಲಾನಿ ನೇತೃತ್ವದಲ್ಲಿ ಕಾಶ್ಮೀರದಲ್ಲಿ ನಡೆದ ರ್ಯಾಲಿಯಲ್ಲಿ ಮಸರತ್ ಆಲಂ ಕೂಡ ಪಾಲ್ಗೊಂಡಿದ್ದು, ಇದೇ ಕಾರ್ಯಕ್ರಮದಲ್ಲಿ ಪಾಕಿಸ್ತಾನಿ ಧ್ವಜ ಹಾರಿಸಿದ ಘಟನೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


