ಮಾಜಿ ಪ್ರಧಾನಿ ವಾಜಪೇಯಿಗೆ 'ಭಾರತ ರತ್ನ' ನೀಡಿದ್ದು ಸರಿಯಲ್ಲ: ಓವೈಸಿ
ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ'....

ಹೈದರಾಬಾದ್: ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಿದ್ದು ಸರಿಯಲ್ಲ ಎಂದು ಅಖೀಲ ಭಾರತ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ)ನ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಓವೈಸಿ, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿರುವ ವಾಜಪೇಯಿ ಅವರಿಗೆ ಭಾರತ ರತ್ನ ಹಾಗೂ ಮಾಜಿ ಉಪ ಪ್ರಧಾನಿ ಎಲ್. ಆಡ್ವಾಣಿ ಅವರಿಗೆ ಪದ್ಮವಿಭೂಷಣ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಈ ಇಬ್ಬರು ನಾಯಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳನ್ನು ನೀಡಿದ್ದು ಸರಿಯಲ್ಲ ಎಂದು ಹೇಳುವ ಮೂಲಕ ಓವೈಸಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕಳೆದ ಮಾರ್ಚ್ 27ರಂದು ವಾಜಪೇಯಿ ಅವರ ನಿವಾಸಕ್ಕೆ ತೆರಳಿ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


