ಮ.ಪ್ರದೇಶ: ಕಾಲುವೆಗೆ ಉರುಳಿ, ಹೊತ್ತಿ ಉರಿದ ಬಸ್, 35 ಮಂದಿ ಸಾವು
ಮಧ್ಯಪ್ರದೇಶದ ಭೋಪಾಲ್ನಲ್ಲಿ ಸೋಮವಾರ ಮಧ್ಯಾಹ್ನ ಬಸ್ವೊಂದು ಪನ್ನಾ ಬಳಿ ಕಾಲುವೆಗೆ ಉರುಳಿ, ಬೆಂಕಿ ಹೊತ್ತಿಕೊಂಡ ಪರಿಣಾಮ, 35 ಮಂದಿ ಸಜೀವ....

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನಲ್ಲಿ ಸೋಮವಾರ ಮಧ್ಯಾಹ್ನ ಬಸ್ವೊಂದು ಪನ್ನಾ ಬಳಿ ಕಾಲುವೆಗೆ ಉರುಳಿ, ಬೆಂಕಿ ಹೊತ್ತಿಕೊಂಡ ಪರಿಣಾಮ, 35 ಮಂದಿ ಸಜೀವ ದಹನವಾಗಿದ್ದಾರೆ ಮತ್ತು 12 ಪ್ರಾಯಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಛತ್ತರಪುರದಿಂದ ಸಾತ್ನಾಗೆ 42 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರಿರದ ಕಾಲುವೆಗೆ ಉರುಳಿ ಬಿದ್ದಿದೆ.
ಪಾಂಡವ ಫಾಲ್ಸ್ ಸಮೀಪದ ಪನ್ನಾ ರಾಷ್ಚ್ರೀಯ ಉದ್ಯಾನವನದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಕುರಿತು ಮಧ್ಯಪ್ರದೇಶ ಸರ್ಕಾರ ನ್ಯಾಯಾಂಗ ತನಿಖಗೆ ಆದೇಶಿಸಿದೆ. ಅಲ್ಲದೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದೆ.
ಬಸ್ ಸುಮಾರು 15 ಅಡಿ ಆಳದ ಕಾಲುವೆಗೆ ಉರುಳಿ ಬೀಳುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಭೀಕರ ಅಪಘಾತದಲ್ಲಿ 28 ಮಂದಿ ಮೃತಪಟ್ಟಿದ್ದಾರೆ ಎಂದು ಮತ್ತು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್ಎನ್ ಚೌವ್ಹಾಣ್ ಅವರು ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಕನಿಷ್ಠ 35 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


