ಆಪ್ ನಾಯಕನ ಅಕ್ರಮ ಸಂಬಂಧ ಪ್ರಕರಣ: ತನಿಖೆ ನಡೆಯುತ್ತಿದೆ; ದೆಹಲಿ ಪೊಲೀಸ್
ತಮ್ಮ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರೊಂದಿಗೆ ತಾನು ಅಕ್ರಮ ಸಂಬಂಧ ಹೊಂದಿರುವುದಾಗಿ ಕೆಲವು ವ್ಯಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ...

ನವದೆಹಲಿ: ತಮ್ಮ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರೊಂದಿಗೆ ತಾನು ಅಕ್ರಮ ಸಂಬಂಧ ಹೊಂದಿರುವುದಾಗಿ ಕೆಲವು ವ್ಯಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆ ದೂರಿನ ನೀಡಿದ ಬಳಿಕ ಎಫ್‌ಐಆರ್ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ಏಪ್ರಿಲ್ 29ರಂದೇ ಐಪಿಸಿ ಸೆಕ್ಷನ್ 509(ಮಹಿಳೆಯ ಗೌರವಕ್ಕೆ ಧಕ್ಕೆ ತರುವುದು) ಹಾಗೂ ಸೆಕ್ಷನ್ 67ರಡಿ ನಂದನಗರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಪ್ರಕರಣದ ಕುರಿತು ತನಿಖೆ ಸಹ ನಡೆಯುತ್ತಿದೆ. ಆದರೆ ಪ್ರಕರಣ ಸಂಬಂಧ ಇದುವರೆಗೂ ಯಾರನ್ನು ಬಂಧಿಸಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ವೀಣು ಬನ್ಸಾಲ್ ಅವರು ಹೇಳಿದ್ದಾರೆ.
ಆದಾಗ್ಯೂ, ದೆಹಲಿ ಉಪ ಪೊಲೀಸ್ ಆಯುಕ್ತರು, ಎಫ್‌ಐಆರ್‌ನಲ್ಲಿರುವ ಆರೋಪಿಗಳ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದರು.
ಕುಮಾರ್ ವಿಶ್ವಾಸ್ ತಮ್ಮೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಗಾಳಿ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದ್ದರೂ ಇದನ್ನು ನಿರಾಕರಿಸದೇ ಮೌನ ವಹಿಸಿದ್ದ ಕುಮಾರ್ ವಿಶ್ವಾಸ್ ವಿರುದ್ದ ಆಪ್ ಕಾರ್ಯಕರ್ತೆ ದೆಹಲಿ ಪೊಲೀಸರಿಗೆ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಸಂಬಂಧ ಮಹಿಳಾ ಆಯೋಗ ಕುಮಾರ್ ವಿಶ್ವಾಸ್ ಅವರಿಗೆ ನೋಟಿಸ್ ಸಹ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


